ವಿಜಯಪುರ: ಕಬಡ್ಡಿ ಆಟಗಾರರಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕ್ರೀಡಾ ಪಟುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
10 ಜನ ಕಬಡ್ಡಿ ಆಟಗಾರರು ಹುಬ್ಬಳ್ಳಿಯಲ್ಲಿ ನಡೆಯುತ್ತಿದ್ದ ಕ್ರೀಡಾಕೂಟಕ್ಕೆ ಭಾಗವಹಿಸಲು ತೆರಳುತ್ತಿದ್ದಾಗ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾಳ ಕ್ರಾಸ್ ಬಳಿ ಲಾರಿಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದ್ದು, ಸ್ಥಳದಲ್ಲೇ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿದ್ದಾರೆ.
ಇನ್ನು 8 ಜನರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.