ಉತ್ತರ ಕನ್ನಡ: ಕೇಂದ್ರ ಆಯುಷ್ ಸಚಿವಾಲಯದ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಬಳಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಸಚಿವರ ಪತ್ನಿ ವಿಜಯಾ ನಾಯಕ್ ಸಾವನ್ನಪ್ಪಿದ್ದು, ಇನ್ನು ಸಚಿವರೂ ಸೇರಿ ನಾಲ್ವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಚಿವ ಶ್ರೀಪಾದ್ ನಾಯಕ್ ಅವರು ಯಲ್ಲಾಪುರದಿಂದ ಗೋಕರ್ಣಕ್ಕೆ ಹೋಗುವ ವೇಳೆ ಉತ್ತರ ಕನ್ನಡ ಹೊಸಕುಂಬಿ ಗ್ರಾಮದ ಬಳಿ ಕಾರು ಪಲ್ಟಿಯಾಗುದ್ದು, ಕಾರಿನಲ್ಲಿದ್ದ ಸಚಿವರ ಹೆಂಡತಿ ವಿಜಯಾ ನಾಯಕ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಶ್ರೀಪಾದ್ ನಾಯಕ್ ಅವರು ಉತ್ತರ ಗೋವಾ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



