ರಾಜ್ಯ ಸರ್ಕಾರದ ಮಹತ್ವದ ಆದೇಶ: ಅಕ್ಟೊಬರ್ 30 ರವರೆಗೆ ಶಾಲೆಗಳಗೆ ಮಧ್ಯಂತರ ರಜೆ ಘೋಷಣೆ..!

ಬೆಂಗಳೂರು: ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ, ಅಕ್ಟೊಬರ್ 30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಅವರು ಮಾಹಿತಿ…

b s yediyurappa vijayaprabha

ಬೆಂಗಳೂರು: ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ, ಅಕ್ಟೊಬರ್ 30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಎಂ ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದು, ಕೋವಿಡ್-೧೯ ಸೋಂಕಿನ ಹಿನ್ನಲೆ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.

‘ಹಲವಾರು ಶಿಕ್ಷಕರು ಕರೋನ ಸೋಂಕಿಗೆ ಒಳಗಾಗಿರುವುದನ್ನು ಸಹ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ಅ.30ರವರೆಗೆ ಮೂರೂ ವಾರಗಳ ಕಾಲ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಸಿ.ಏನ್ ಯಡಿಯೂರಪ್ಪ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.