ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದು, “ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದಲ್ಲಿ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ.
ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಸರಕಾರಿ ಶಾಲೆ ಶಿಕ್ಷಕರು ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಈ ವರ್ಷದಲ್ಲಿ ಅಕ್ಟೋಬರ್ 3 ರಿಂದ 26 ರವರೆಗೆ ನೀಡಬೇಕಿದ್ದ ಮಧ್ಯಂತರ ರಜೆಯನ್ನು ಸರ್ಕಾರ ರದ್ದು ಮಾಡಿರುವುದಕ್ಕೆ ಆಧಾರ ಏನಿದೆ? ಎಂದು ಪ್ರಶಿನಿದ್ದಲ್ಲದೆ ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೆ? ಎಂದು ಕೇಳಿದ್ದಾರೆ.
ಕೊರೊನ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಯಾವ ಪುರುಷಾರ್ಥ ಸಾಧನೆ ಮಾಡಲು ಸರಕಾರ ಹೊರಟಿದೆ?
ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ,ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ
ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಸಬೇಷಿಕು ಎಂದು ಟ್ವೀಟ್ ಮಾಡಿ ಎಚ್ ಡಿ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.
1/5— H D Kumaraswamy (@hd_kumaraswamy) October 11, 2020