ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಜುಲೈ ತಿಂಗಳೊಂದರಲ್ಲೆ 1,652 ಪ್ರಕರಣ ದೃಢಪಟ್ಟಿವೆ. ಈವರೆಗೆ ಡೆಂಗಿ ಪೀಡಿತರಾದವರ ಒಟ್ಟು ಸಂಖ್ಯೆ 4,126ಕ್ಕೆ ಏರಿಕೆಯಾಗಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.
ಕಳೆದ ವರ್ಷ ಈ ವೇಳೆ ಡೆಂಗಿ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿಯೊಳಗಿತ್ತು. ಈ ವರ್ಷ 77 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 31,070 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಕಾಟ; ಈ ಮುನ್ನೆಚ್ಚರಿಕೆ ವಹಿಸಿ!
*ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಿ.
*ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಿ.
*ನೀರು ನಿಲ್ಲದಂತೆ ಎಚ್ಚರ ವಹಿಸಿ.
*ಮಲಗುವಾಗ ಸೊಳ್ಳೆಪರದೆ ಬಳಸಿ.
*ಕುದಿಸಿ, ಆರಿಸಿದ ನೀರನ್ನು ಕುಡಿಯಿರಿ.
*ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಿ.