ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರ ಮೇಲೆ ಕಪ್ಪು ಮಸಿ ಎಸೆಯಲಾದ ಘಟನೆ ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನಲೆ ಮಹಿಳಾ ವಕೀಲೆ ಮೀರಾ ರಾಘವೇಂದ್ರ ಎನ್ನುವರು ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರ ಮೇಲೆ ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಪ್ರೊ.ಕೆ.ಎಸ್. ಭಗವಾನ್ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ನಡೆಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಿಚಾರಣೆ ಮುಗಿಸಿಕೊಂಡು ಹೊರಬಂದ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಅವರ ಮೇಲೆ ವಕೀಲೆ ಮೀರಾ ರಾಘವೇಂದ್ರ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅವರು ಭಗವಾನ್ ಮೇಲೆ ಮಸಿ ಎಸೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಪ್ರೊ.ಕೆ.ಎಸ್. ಭಗವಾನ್ ಅವರು ಹಿಂದೂ ಧರ್ಮ ಧರ್ಮವೇ ಅಲ್ಲ, ಹಿಂದೂ ಎಂಬ ಅವಮಾನಕರ, ಹಿಂದೂ ಎಂಬ ಪದವನ್ನೇ ತೆಗೆದು ಹಾಕಬೇಕು. ಹಿಂದು ಧರ್ಮ ಎಂದರೆ ಬ್ರಾಹ್ಮಣ ಎಂದರ್ಥ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.