ಬೆಂಗಳೂರು: ಬ್ಲ್ಯಾಕ್ ಫಂಗಸ್ ರೋಗಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಆಂಪೋಟೆರಿಸಿನ್ ಬಿ ಹೆಸರಿನ 1,280 ವಯಲ್ಸ್ ಔಷಧ ಹಂಚಿಕೆ ಮಾಡಿದೆ ಎಂಬುದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಇಂದು ಸ್ಪಷ್ಟಪಡಿಸಿದ್ದಾರೆ.
ದೇಶದ ವಿವಿಧ ರಾಜ್ಯಗಳಿಗೆ 23,680 ವಯಲ್ಸ್ ಔಷಧವನ್ನು ವಿತರಿಸಲಾಗಿದ್ದು, ದೇಶಾದ್ಯಂತ 8,840 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ.
ಈ ಪೈಕಿ 500 ಪ್ರಕರಣಗಳು ಕರ್ನಾಟಕದಲ್ಲೇ ಪತ್ತೆಯಾಗಿದ್ದು, ಹೆಚ್ಚು ಪ್ರಕರಣಗಳಿರುವ ರಾಜ್ಯಗಳಿಗೆ ಹೆಚ್ಚು ವಯಲ್ಸ್ ಹಂಚಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.