ಐಪಿಎಲ್ ನಲ್ಲಿ ದೋನಿ ದ್ವಿಶತಕ ಸಾಧನೆ !

ಚೆನ್ನೈ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ನಡೆಯಲಿರುವ ಐಪಿಎಲ್ ಟಿ20 ಟೂರ್ನಿಯಲ್ಲಿ ‘ದ್ವಿಶತಕ’ ಸಾಧನೆ ಮಾಡಲಿದ್ದಾರೆ. ಹೌದು ಈಗಾಗಲೇ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಂಡಿರುವ…

ಚೆನ್ನೈ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದು ನಡೆಯಲಿರುವ ಐಪಿಎಲ್ ಟಿ20 ಟೂರ್ನಿಯಲ್ಲಿ ‘ದ್ವಿಶತಕ’ ಸಾಧನೆ ಮಾಡಲಿದ್ದಾರೆ.

ಹೌದು ಈಗಾಗಲೇ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಂಡಿರುವ ಮಹೇಂದ್ರ ಸಿಂಗ್ ದೋನಿಗೆ ಇಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ಎದುರಿನ ಹಣಾಹಣಿಯು 200ನೇ ಪಂದ್ಯವಾಗಲಿದ್ದು, ಈ ಮೂಲಕ ಐಪಿಎಲ್ ನಲ್ಲಿ ದ್ವಿಶತಕ ಸಾಧನೆ ಮಾಡಿದ ಮೊದಲ ಆಟಗಾರನಾಗಲಿದ್ದಾರೆ.

ದೋನಿ ಈವರೆಗೆ ಐಪಿಎಲ್ ನಲ್ಲಿ 199 ಪಂದ್ಯಗಳನ್ನಾದಿದ್ದು, 4568 ರನ್ ಗಳಿಸಿದ್ದಾರೆ. ಇದರಲ್ಲಿ 23 ಅರ್ಧಶತಕಗಳು ಸೇರಿದ್ದು, 84 ರನ್ ಗಳಿಸಿದ್ದು ಅವರ ವ್ಯಯಕ್ತಿಕ ಗರಿಷ್ಠ ಮೊತ್ತವಾಗಿದೆ. ಇನ್ನು ಐಪಿಎಲ್ ನಲ್ಲಿ ದೋನಿ 68 ಭಾರಿ ನಾಟೌಟ್ ಆಗಿದ್ದು, ಬರೋಬ್ಬರಿ 215 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ.

Vijayaprabha Mobile App free

ಇಂದು ನಡೆಯಲಿರುವ ರಾಜಸ್ತಾನ್ ವಿರುದ್ದದ ಪಂದ್ಯದಲ್ಲಿ ಗೆಲ್ಲುವ ಮೂಲಕ ಧೋನಿ ತಮ್ಮ 200ನೇ ಪಂದ್ಯವನ್ನು ಸ್ಮರಣೀಯಗೊಳಿಸಿಕೊಳ್ಳುವತ್ತ ಚಿತ್ತ ಹರಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.