Maharastra Election: ಕಾರಿನಲ್ಲಿ 24 ಕೋಟಿ ಮೌಲ್ಯದ ವಜ್ರ, ಆಭರಣ ವಶ!

ಮುಂಬೈ: ಚುನಾವಣೆ ಘೋಷಣೆಯಾಗಿರುವ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಟೋಲ್ ಬೂತ್ ಬಳಿ ಚುನಾವಣಾ ಆಯೋಗದ ಸ್ಟಾಟಿಕ್ ಸರ್ವೆಲೆನ್ಸ್ ತಂಡ (SST) ಸುಮಾರು 24 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು…

ಮುಂಬೈ: ಚುನಾವಣೆ ಘೋಷಣೆಯಾಗಿರುವ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಟೋಲ್ ಬೂತ್ ಬಳಿ ಚುನಾವಣಾ ಆಯೋಗದ ಸ್ಟಾಟಿಕ್ ಸರ್ವೆಲೆನ್ಸ್ ತಂಡ (SST) ಸುಮಾರು 24 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ನವೆಂಬರ್ 20 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರದಾದ್ಯಂತ ಎಸ್‌ಎಸ್‌ಟಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

“ಮೂವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ವಜ್ರ, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ದಕ್ಷಿಣ ಮುಂಬೈನ ಝವೇರಿ ಬಜಾರ್‌ನಿಂದ ತಮ್ಮ ಕಾರಿನಲ್ಲಿ ಹೊರಟಿದ್ದರು” ಎಂದು ಸುಪಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅರುಣ್ ಅವಹದ್ ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ SST ತಂಡವು ಕಾರನ್ನು ತಡೆದು ತಪಾಸಣೆ ನಡೆಸಿದ್ದು, ಕಾರಿನಲ್ಲಿದ್ದ ಚಿನ್ನ, ವಜ್ರಕ್ಕೆ ರಶೀದಿ ತೋರಿಸುವಂತೆ ಅಧಿಕಾರಿಗಳು ಕೇಳಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರು ಕೆಲವು ರಸೀದಿಗಳನ್ನು ತೋರಿಸಿದರಾದರೂ, ಅದರಲ್ಲಿ ನಮೂದಿಸಲಾದ ಮೊತ್ತವು ತಾಳೆಯಾಗಲಿಲ್ಲ ಎಂದು ಅವರು ಹೇಳಿದರು.

ಇದರ ನಂತರ, ಎಸ್‌ಎಸ್‌ಟಿ ಆಭರಣಗಳನ್ನು ವಶಪಡಿಸಿಕೊಂಡಿದ್ದು ಮತ್ತು ಆದಾಯ ತೆರಿಗೆ ಇಲಾಖೆಗೆ ವಿಷಯವನ್ನು ವರದಿ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಛತ್ರಪತಿ ಸಂಭಾಜಿನಗರ, ಅಹಲ್ಯಾನಗರ ಮತ್ತು ಜಲಗಾಂವ್ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಆಭರಣಗಳನ್ನು ತಲುಪಿಸಲು ಉದ್ದೇಶಿಸಲಾಗಿತ್ತು ಎಂದು ಮೂವರು ವ್ಯಕ್ತಿಗಳು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು. 

Vijayaprabha Mobile App free

ಇನ್ನೊಂದೆಡೆ ಗುರುವಾರ, ಎಸ್‌ಎಸ್‌ಟಿ ತಂಡ ಮತ್ತು ಪೊಲೀಸ್ ಸಿಬ್ಬಂದಿ ದಕ್ಷಿಣ ಮುಂಬೈನ ಮರೈನ್ ಡ್ರೈವ್‌ನಲ್ಲಿ ಕಾರಿನಿಂದ 10.8 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡ ಘಟನೆ ಸಹ ನಡೆದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.