ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ನೌಕರರಿಗೆ ವೇತನ ನೀಡದ ಹಿನ್ನಲೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿ, KSRTCಯ 4 ನಿಗಮಗಳ ನೌಕರರಿಗೆ ವೇತನ ನೀಡದಿರುವುದು ಸಾರಿಗೆ ಇಲಾಖೆ ಹಾಗು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ ಎಂದು ಕಿಡಿಕಾರಿದ್ದಾರೆ. ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ಸಿಬ್ಬಂದಿಗಳಿಗೆ ಸಂಬಳ ನೀಡಿಲ್ಲ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸುವುದು ಹೇಗೆ? ಸರ್ಕಾರ ಕೂಡಲೇ ಸಾರಿಗೆ ನೌಕರರ ಸಂಬಳದ ಬಗ್ಗೆ ಗಮನ ಹರಿಸಬೇಕು.
ಸಾರಿಗೆ ನೌಕರರ ಸಂಬಳ ಆಗದಿರುವದಕ್ಕೆ ಸಚಿವ ಲಕ್ಷ್ಮಣ್ ಸವದಿ ಅವರು ಕೋವಿಡ್ ಸೋಂಕಿನ ನೆಪ ಹೇಳಿದ್ದಾರೆ. ಕೋವಿಡ್ ಬಿಸಿ ಕೇವಲ ಸಾರಿಗೆ ಇಲಾಖೆಗೆ ಮಾತ್ರ ತಟ್ಟಿಲ್ಲ. ಕೋವಿಡ್ ಸೋಂಕು ನೆಪ ಹೇಳುವುದು ಬಿಟ್ಟು ಸಾರಿಗೆ ಇಲಾಖೆ, ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದ್ದು, ಈಗ ಹಣಕಾಸು ಇಲಾಖೆ ಕಡೆ ಬೊಟ್ಟು ತೋರಿಸಿದರೆ ಸಾರಿಗೆ ನೌಕರರ ಜೀವನ ನಡೆಯುವುದ್ದೇಗೆ? ಎಂದು ಮಾಜಿ ಕೆಪಿಸಿಸಿ ಅದ್ಯಕ್ಸ್ಯ ದಿನೇಶ್ ಗುಂಡೂರಾವ್ ಅವರು ಸರ್ಕಾರವನ್ನು ಪ್ರಶ್ನಿಸಿದ್ದಾರೆ
1
KSRTCಯ 4 ನಿಗಮಗಳ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ.
ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ.ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸದಂತಾಗಿದೆ.
ಸರ್ಕಾರ ಈ ಕೂಡಲೇ ಗಮನ ಹರಿಸಬೇಕು. pic.twitter.com/kkUwAeWPE0— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 15, 2020