ಚಿತ್ರರಂಗದಲ್ಲಿ ಮತ್ತೊಂದು ದುರಂತ; ‘ಡರ್ಟಿ ಪಿಕ್ಚರ್’ ನಟಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ಕೋಲ್ಕತ್ತಾ: ಈ ವರ್ಷ ಸಿನಿರಂಗದಲ್ಲಿ ನಡೆಯುತ್ತಿರುವ ಸಾವುಗಳ ಸರಣಿಯು ಇಡೀ ಸಿನಿ ಜಗತ್ತನ್ನು ಬೆಚ್ಚಿಬೀಳಿಸಿದೆ. ಕೆಲವು ತಿಂಗಳುಗಳ ಹಿಂದೆ ಬಾಲಿವುಡ್‌ನ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಕರೋನಾದಿಂದ ಹಲವಾರು ಸಿನಿ…

Arya Banerjee vijayaprabha

ಕೋಲ್ಕತ್ತಾ: ಈ ವರ್ಷ ಸಿನಿರಂಗದಲ್ಲಿ ನಡೆಯುತ್ತಿರುವ ಸಾವುಗಳ ಸರಣಿಯು ಇಡೀ ಸಿನಿ ಜಗತ್ತನ್ನು ಬೆಚ್ಚಿಬೀಳಿಸಿದೆ. ಕೆಲವು ತಿಂಗಳುಗಳ ಹಿಂದೆ ಬಾಲಿವುಡ್‌ನ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಕರೋನಾದಿಂದ ಹಲವಾರು ಸಿನಿ ತಾರೆಯರು ಸಾವನ್ನಪ್ಪಿದರು. ಇನ್ನು ಇತ್ತೀಚೆಗೆ ತಮಿಳು ನಟಿ ವಿ.ಜೆ ಚಿತ್ರಾ ಅವರ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಬಾಲಿವುಡ್ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ‘ಡರ್ಟಿ ಪಿಕ್ಚರ್’ ಚಿತ್ರದಲ್ಲಿ ನಟಿಸಿದ್ದ ನಟಿ ಆರ್ಯ ಬ್ಯಾನರ್ಜಿ (33) ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ನಟಿ ಆರ್ಯ ಬ್ಯಾನರ್ಜಿ ದಕ್ಷಿಣ ಕೋಲ್ಕತ್ತಾದ ಜೋಧ್ಪುರ್ ಪಾರ್ಕ್ನಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ಮನೆಗೆ ಬಂದ ಮನೆ ಕೆಲಸದವಳು ಬಾಗಿಲು ಬಡಿದರೂ ತೆರೆಯಲಿಲ್ಲ ಮತ್ತು ಫೋನ್ ಮಾಡಿದರು ಕೂಡ ಎತ್ತಲಿಲ್ಲ. ಇದರಿಂದ ಮನೆ ಕೆಲಸದವಳು ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾಳೆ.

ಕೂಡಲೇ ಅಲ್ಲಿಗೆ ಬಂದ ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ನಟಿ ಆರ್ಯ ಬ್ಯಾನರ್ಜಿ ಹಾಸಿಗೆಯ ಮೇಲೆ ಶವವಾಗಿ ಕಂಡುಬಂದಿದ್ದಾರೆ. ನಟಿ ಆರ್ಯ ಬ್ಯಾನರ್ಜಿ ಅವರ ಮುಖದ ಮೇಲೆ ಗಾಯಗಳು, ವಾಂತಿ ಮಾಡಿಕೊಂಡಿರುವುದು ಕಂಡುಬಂದಿದ್ದು ಪೊಲೀಸರು ಅನುಮಾನಾಸ್ಪದ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ.

Vijayaprabha Mobile App free

ಆರ್ಯ ಬ್ಯಾನರ್ಜಿಯನ್ನು ಯಾರಾದರೂ ಹತ್ಯೆ ಮಾಡಿದ್ದೀರಾ? ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‘ಡರ್ಟಿ ಪಿಕ್ಚರ್’ ಚಿತ್ರದಲ್ಲಿ ವಿದ್ಯಾ ಬಾಲನ್ ಅವರೊಂದಿಗೆ ನಟಿಸಿರುವ ಆರ್ಯ ಬ್ಯಾನರ್ಜಿ, ಶಕೀಲಾ ಪಾತ್ರದಲ್ಲಿ ನಟಿಸಿದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.