ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಇಬ್ಬರನ್ನೂ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇ-ಗವರ್ನೆನ್ಸ್ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಎರಡು ದಿನಗಳಿಂದ ಇಬ್ಬರೂ ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸಂಸದ ಪ್ರತಾಪ್ ಸಿಂಹ, ಎಸ್ಟಿ ಸೋಮಶೇಖರ್ ವಿರುದ್ದದ ಜಟಾಪಟಿಯೂ ಕೂಡ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿತ್ತು.