Diwali Celebrations Guidelines : ದೀಪಾವಳಿ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ; 10 ಗಂಟೆ ಮೇಲೆ `ಪಟಾಕಿ’ ಸಿಡಿಸಿದ್ರೆ ಕಠಿಣ ಕ್ರಮ!

Diwali Celebrations Guidelines : ಈ ವರ್ಷ ದೀಪಾವಳಿ ಆಚರಣೆಗೆ (Diwali Celebrations) ರಾಜ್ಯ ಸರ್ಕಾರ ಮಾರ್ಗಸೂಚಿ (Guidelines) ಹೊರಡಿಸಿದೆ. ಹೌದು, ದೀಪಾವಳಿ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ರಾತ್ರಿ 8 ರಿಂದ…

Diwali Celebrations Guidelines

Diwali Celebrations Guidelines : ಈ ವರ್ಷ ದೀಪಾವಳಿ ಆಚರಣೆಗೆ (Diwali Celebrations) ರಾಜ್ಯ ಸರ್ಕಾರ ಮಾರ್ಗಸೂಚಿ (Guidelines) ಹೊರಡಿಸಿದೆ.

ಹೌದು, ದೀಪಾವಳಿ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶವಿದ್ದು,10 ಗಂಟೆ ಬಳಿಕ ಪಟಾಕಿ ಸಿಡಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶಿಸಿದೆ.

25 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗವನ್ನು ನಿಷೇಧಿಸಲಾಗಿದೆ. ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ, ವೃದ್ಧಾಶ್ರಮ ಇತ್ಯಾದಿ ಪ್ರದೇಶಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ಧ ಉಂಟುಮಾಡುವಂತಿಲ್ಲ.

Vijayaprabha Mobile App free

ಇದನ್ನೂ ಓದಿ: Actor Darshan : ನಟ ದರ್ಶನ್ ಗೆ ಪಾರ್ಶ್ವವಾಯು ಆಗುವ ಸಾಧ್ಯತೆ..? ವೈದ್ಯಕೀಯ ವರದಿಯಲ್ಲಿ ಬಹಿರಂಗ..!

ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು.

ಯಾವುದೇ ಕ್ರಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಈ ಬಾರಿ “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ರಾಜ್ಯ ಸರ್ಕಾರ ಕೋರಿದೆ.

Diwali Celebrations Guidelines : ಬೆಂಗಳೂರಲ್ಲಿ ಪಟಾಕಿ ಸಿಡಿಸಲು BBMP ಮಾರ್ಗಸೂಚಿ

ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ಮೇರೆಗೆ BBMP ಮಾರ್ಗಸೂಚಿ ಪ್ರಕಟಿಸಿದ್ದು, ಸ್ಫೋಟಕ ಪಟಾಕಿಗಳನ್ನು ಸಿಡಿಸುವುದು ಸಂಪೂರ್ಣ ನಿಷೇಧಿಸಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸುವಂತೆ ಸಾರ್ವಜನಿಕರಿಗೆ ಮಾಲಿನ್ಯ ಮಂಡಳಿ ಮನವಿ ಮಾಡಿದೆ.

ಹೌದು, ಅ.31ರಿಂದ ನ. 2ರ ವರೆಗೆ ಮೂರು ದಿನ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದ್ದು, ಅನಗತ್ಯವಾಗಿ ಪಟಾಕಿ ಮನೆ‍&ಇತರೆ ಜಾಗದಲ್ಲಿ ಶೇಖರಣೆ ಮಾಡದಂತೆಯೂ ಸೂಚನೆ ನೀಡಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಆದೇಶ ಸಂಖ್ಯೆ ಉಲ್ಲೇಖಿಸಿ ಸಾರ್ವಜನಿಕ ಸುತ್ತೋಲೆ ಹೊರಡಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.