ಡಿ.ಕೆ.ಶಿವಕುಮಾರ್ ಪವರ್ ಗೆ ಹೆದರಿದ ಬಿಜೆಪಿ ಸಿಬಿಐ ದಾಳಿ ನಡೆಸಿದೆ; ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಿಡಿ

ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹಾಗೂ ಚಿತ್ರದುರ್ಗ…

Former MP BN Chandrappa

ಚಿತ್ರದುರ್ಗ: ಉಪ ಚುನಾವಣೆಯಲ್ಲಿ ಸೋಲಿನ ಭಯದಿಂದ ಬಿಜೆಪಿ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಹಾಗೂ ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರು ರಾಜಕೀಯ ಪ್ರೇರಿತ ದಾಳಿ ಮುಂದುವರಿಸಿದ್ದಾರೆ. ಸಿಬಿಐಯನ್ನು ಅಸ್ತ್ರವಾಗಿ ಬಳಸಿಕೊಂಡು ಸತ್ಯವನ್ನು ಮಾತನಾಡುವವರ ಮೇಲೆ ದಾಳಿ ನಡೆಸಲಾಗುತ್ತಿದೆ. ಉಪಚುನಾವಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರ ಪವರಿಗೆ ಬಿಜೆಪಿ ನಾಯಕರು ಹೆದರಿದ್ದಾರೆ. ಈ ಕಾರಣಕ್ಕೆ ಸಿಬಿಐ ಅಧಿಕಾರಿಗಳಿಂದ ದಾಳಿ ನಡೆಸಿದ್ದಾರೆ. ಇದನ್ನು ಕಾಂಗ್ರೆಸ್ ಪ್ಷ ತೀವ್ರವಾಗಿ ಖಂಡಿಸುತ್ತಿದೆ ಎಂದರು.

ದೇಶದಲ್ಲಿ ದಲಿತರು, ಹಿಂದುಳಿದ ವರ್ಗದ ಮಹಿಳೆಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಲಾಗುತ್ತಿದೆ. ಇದನ್ನು ತೀವ್ರವಾಗಿ ಕಾಂಗ್ರೆಸ್ ಪಕ್ಷ ವಿರೋಧ ಮಾಡುತ್ತಿದ್ದು, ಬಡವರ ಪರವಾಗಿ ಹೋರಾಟ ನಡೆಸುತ್ತಿದೆ. ಇದನ್ನು ಸಹಿಸದ ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುತ್ತಿದೆ ಎಂದು ದೂರಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.