ಪ್ರಯಾಗ್ ರಾಜ್: ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ತ್ರಿವೇಣಿ ಸಂಗಮದಲ್ಲಿ ಭಾನುವಾರ(ಫೆಬ್ರವರಿ 9) ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದರು.
ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಡಿ.ಕೆ.ಶಿವಕುಮಾರರು ಕೆಲವು ಸಂತರೊಂದಿಗೆ ಪವಿತ್ರ ಸ್ನಾನ ಮಾಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, “ಕುಂಭಮೇಳವನ್ನು ಅತ್ಯಂತ ಪವಿತ್ರ ರೀತಿಯಲ್ಲಿ ಆಯೋಜಿಸಿದ್ದಕ್ಕಾಗಿ ನಾನು ಎಲ್ಲಾ ಸಂಘಟಕರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದು ಒಬ್ಬರ ಜೀವನದಲ್ಲಿ ಬರುವ ಒಂದು ಐತಿಹಾಸಿಕ ಕ್ಷಣವಾಗಿದೆ” ಎಂದು ಹೇಳಿದರು.
“ಇಲ್ಲಿಗೆ ಬಂದಿರುವ ಜನರ ಕೋಟ್ಯಂತರ ಜನರು ಎಲ್ಲಾ ವ್ಯವಸ್ಥೆಗಳನ್ನು ಗಮನಿಸುತ್ತಿದ್ದಾರೆ. ಇದು ಸಣ್ಣ ಕೆಲಸವಲ್ಲ ಎಂದು ನನಗೆ ತಿಳಿದಿದೆ” ಎಂದು ಅವರು ಹೇಳಿದರು.