ಸೋಂಕಿತ ತಾಯಂದಿರು ಎದೆ ಹಾಲುಣಿಸುವುದರಿಂದ ಹಸುಗೂಸುಗಳಿಗೂ ಸೊಂಕು ಹರಡುತ್ತದೆಯೇ..? ಇಲ್ಲಿದೆ ಡಾಕ್ಟರ್ ಕೊಟ್ಟ ಉತ್ತರ

ದಾವಣಗೆರೆ: ಕೊರೊನಾ ಸೋಂಕು ತಗುಲಿದ್ದರೂ ಕೂಡ ಮಾಸ್ಕ್ ಧರಿಸಿ, ತಾಯಂದಿರು ಹಸುಗೂಸುಗಳಿಗೆ ಹಾಲುಣಿಸಬಹುದು. ತಾಯಿಯ ಎದೆ ಹಾಲಿನಿಂದ ಕೊರೊನಾ ಸೋಂಕು ಮಗುವಿಗೆ ಹರಡುವುದಿಲ್ಲ. ಆದರೆ ಮಕ್ಕಳಿಗೆ ಹಾಲುಣಿಸುವಾಗ ತಾಯಂದಿರು ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು…

ದಾವಣಗೆರೆ: ಕೊರೊನಾ ಸೋಂಕು ತಗುಲಿದ್ದರೂ ಕೂಡ ಮಾಸ್ಕ್ ಧರಿಸಿ, ತಾಯಂದಿರು ಹಸುಗೂಸುಗಳಿಗೆ ಹಾಲುಣಿಸಬಹುದು. ತಾಯಿಯ ಎದೆ ಹಾಲಿನಿಂದ ಕೊರೊನಾ ಸೋಂಕು ಮಗುವಿಗೆ ಹರಡುವುದಿಲ್ಲ. ಆದರೆ ಮಕ್ಕಳಿಗೆ ಹಾಲುಣಿಸುವಾಗ ತಾಯಂದಿರು ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಆರ್. ಸಿ. ಹೆಚ್ ಅಧಿಕಾರಿ ಡಾ. ಮೀನಾಕ್ಷಿ ಹೇಳಿದ್ದಾರೆ.

ಸೋಂಕಿತ ತಾಯಂದಿರು ಮಾಸ್ಕ್ ಧರಿಸದೆ ಕೆಮ್ಮುವುದು, ಸೀನುವುದು ಮಾಡುವುದರಿಂದ ಮಗುವಿಗೆ ಸೋಂಕು ಹರಡುವ ಸಾಧ್ಯತೆ ಹೆಚ್ಚು. ಆದ್ದರಿಂದ ಕರೋನ ಸೋಂಕಿತ ತಾಯಂದಿರು ತಪ್ಪದೆ ಮಾಸ್ಕ್ ಧರಿಸಿಯೇ ಮಗುವಿಗೆ ಹಾಲುಣಿಸಬೇಕು, ಬಳಿಕ ಮಗುವನ್ನು ಸುರಕ್ಷಿತ ಅಂತರದಲ್ಲಿ ಪ್ರತ್ಯೇಕವಾಗಿ ಮಲಗಿಸಬೇಕು, ಹಾಲುಣಿಸುವ ಮೊದಲು ಹಾಗೂ ನಂತರ, ಪ್ರತಿ ಬಾರಿಯೂ ತಾಯಿ ಕೈಯನ್ನು ಸಾಬೂನಿನಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಎಂದು ಅಧಿಕಾರಿ ಡಾ. ಮೀನಾಕ್ಷಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ತಾಯಂದಿರು ಬಾಟಲಿಯಿಂದ ಮಗುವಿಗೆ ಹಾಲುಣಿಸುತ್ತಿದ್ದರೆ, ಪ್ರತಿ ಬಾರಿಯೂ ನಿಪ್ಪಲ್ ಮತ್ತು ಬಾಟಲಿಯನ್ನು ಬಿಸಿ ನೀರಿನಿಂದ ತಪ್ಪದೆ ಸ್ವಚ್ಛಗೊಳಿಸಬೇಕು. ಇನ್ನು, ಕರೋನ ಸೊಂಕು ಮುಕ್ತವಾಗುವವರೆಗೂ ತಾಯಂದಿರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ, ತಾಯಿ, ಮಗುವಿನ ಆರೋಗ್ಯಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.