ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳನ್ನು ಅರೆಸ್ಟ್ ಮಾಡಲಾಗಿದ್ದು, ಹಾವೇರಿ ಜಿಲ್ಲೆ ಬಂಕಾಪುರ ಹೆದ್ದಾರಿಯಲ್ಲಿ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ಯಲಾಗುತ್ತಿದೆ.
ಪೋಕ್ಸೋ ಪ್ರಕರಣ ದಾಖಲಾದ ಮೇಲೆ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳು ಅಜ್ಞಾತ ಸ್ಥಳಕ್ಕೆ ತೆರಳುವ ಬಗ್ಗೆ ವರದಿಯಾಗಿತ್ತು. ಈ ಬಗ್ಗೆ ಚುರುಕಾದ ಪೊಲೀಸರು ಹೆದ್ದಾರಿಯಲ್ಲಿ ತಡೆದು ವಶಕ್ಕೆ ಪಡೆದಿದ್ದಾರೆ. ಶ್ರೀಗಳು ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.