Drone Pratap : ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಬ್ಲಾಸ್ಟ್ (Sodium Blast) ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್(Drone Pratap) ನನ್ನು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ (arrested).
ಹೌದು, ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ (Environmentalist) ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಡ್ರೋನ್ ಪ್ರತಾಪ್‌ನನ್ನು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡು ಬಂಧಿಸಿದ್ದಾರೆ.
ಇದನ್ನೂ ಓದಿ: Mokshita Pai | ಬಿಗ್‌ಬಾಸ್ ಖ್ಯಾತಿಯ ಮೋಕ್ಷಿತಾ ಪೈ ಮಕ್ಕಳ ಕಳ್ಳಿ? ಮುಗ್ಧತೆ ಹಿಂದೆ ಕರಾಳ ಮುಖದ ಸತ್ಯವೇನು!?
Drone Pratap : ಎಡವಟ್ಟು ಮಾಡಿಕೊಂಡ ಡ್ರೋನ್ ಪ್ರತಾಪ್
ಸೈನ್ಸ್ ವಿಡಿಯೋ ಹೆಸರಿನಲ್ಲಿ ಡ್ರೋನ್ ಪ್ರತಾಪ್ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ನೀರಿನೊಳಗೆ ಕೆಮಿಕಲ್ (Chemical) ಹಾಕಿ ಬ್ಲಾಸ್ಟ್ ಮಾಡಿದ ವಿಡಿಯೋ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿಒಳಗಾಗಿದ್ದು, ಪ್ರತಾಪ್ ಹುಚ್ಚಾಟಕ್ಕೆ ಕಿಡಿ ಕಾರಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದ್ದು, ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ.
ಇದನ್ನೂ ಓದಿ: ಐಷಾರಾಮಿ ಮನೆಯಿಂದ ದುಬಾರಿ ಕಾರುಗಳವರೆಗೆ: 74 ನೇ ಹುಟ್ಟುಹಬ್ಬದಂದು ರಜನಿಕಾಂತ್ ಅವರ ಆಸ್ತಿ ಎಷ್ಟು ನೋಡಿ..