Drone Prathap: ಡ್ರೋನ್ ಪ್ರತಾಪ್‌ಗೆ ಮತ್ತೆ ಬಂಧನ ಭೀತಿ!

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿದ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ಡ್ರೋಣ್ ಪ್ರತಾಪ್ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಪಶು ವೈದ್ಯರಾಗಿರುವ ಪ್ರಯಾಗ್ ಅವರು, ಪ್ರತಾಪ್…

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿದ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ಡ್ರೋಣ್ ಪ್ರತಾಪ್ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.

ಪಶು ವೈದ್ಯರಾಗಿರುವ ಪ್ರಯಾಗ್ ಅವರು, ಪ್ರತಾಪ್ ವಿರುದ್ಧ ಎಡಿಜಿಪಿ ಹಿತೇಂದ್ರ ಕುಮಾರ್ ಗೆ ದೂರು ನೀಡಿದ್ದಾರೆ. ಲೈಸೆನ್ಸ್ ಇಲ್ಲದೇ ಬೇರೆಯವರಿಗೆ ಡ್ರೋಣ್ ಹಾರಿಸಲು ಪ್ರತಾಪ್ ಪ್ರಚೋದನೆ ನೀಡಿದ್ದಾರೆ. ಲೈಸೆನ್ಸ್ ಇಲ್ಲದೇ ಡ್ರೋಣ್ ಹಾರಿಸಿ ಅದರ ಸಂಶೋಧನೆ ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ. ಕೃಷಿ ಮಾಡುವ ರೈತರಿಗೆ ಡ್ರೋಣ್ ಹೆಸರಲ್ಲಿ ಔಷಧಿ ಸಿಂಪಡಿಕೆ ಮಾಡಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸೋಡಿಯಂ ರಸಾಯನಿಕ ವಿಚಾರದಲ್ಲಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಡ್ರೋಣ್ ಪ್ರತಾಪ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. 9 ದಿನ ಜೈಲುವಾಸ ಅನುಭವಿಸಿದ್ದ ಪ್ರತಾಪ್ಗೆ ಮತ್ತೆ ಜೈಲು ಸೇರುವ ಆತಂಕ ಎದುರಾಗಿದೆ. ಪ್ರತಾಪ್ ಮೇಲೆ ಕಾನೂನು ಕ್ರಮ ಜರುಗಿಸಿ ಎಂದು ಪ್ರಯಾಗ್ ದೂರು ನೀಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.