ಇಂದು ಡೈನಾಮಿಕ್ ಸ್ಟಾರ್ ದೇವರಾಜ್ ಹುಟ್ಟುಹಬ್ಬ: ಶುಭ ಕೋರಿದ ನಟ ದರ್ಶನ್, ಬಿ. ಸಿ ಪಾಟೀಲ್, ಜಗ್ಗೇಶ್!

ಬೆಂಗಳೂರು: ಇಂದು ಕನ್ನಡ ಚಿತ್ರರಂಗದ ಖ್ಯಾತ ಬಹುಭಾಷಾ ನಟ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಹುಟ್ಟುಹಬ್ಬ ಹಿನ್ನಲೆ, ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್, ನಟ, ಕೃಷಿ ಸಚಿವ ಬಿ. ಸಿ ಪಾಟೀಲ್ , ನವರಸ…

devaraj and dharshan

ಬೆಂಗಳೂರು: ಇಂದು ಕನ್ನಡ ಚಿತ್ರರಂಗದ ಖ್ಯಾತ ಬಹುಭಾಷಾ ನಟ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಹುಟ್ಟುಹಬ್ಬ ಹಿನ್ನಲೆ, ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್, ನಟ, ಕೃಷಿ ಸಚಿವ ಬಿ. ಸಿ ಪಾಟೀಲ್ , ನವರಸ ನಾಯಕ ಜಗ್ಗೇಶ್ ಸೇರಿದಂತೆ ಅನೇಕ ನಟ, ನಟಿಯರು, ಗಣ್ಯರು, ರಾಜಕಾರಿಗಳು ಶುಭಕೋರಿದ್ದಾರೆ.

ನಟ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವೀಟ್ ಮಾಡಿ “ನಮ್ಮ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿರುವ ನಮ್ಮೆಲ್ಲರ ಪ್ರೀತಿಯ ಡೈನಾಮಿಕ್ ಹೀರೋ ದೇವರಾಜ್ ಸರ್ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಅವರ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

Vijayaprabha Mobile App free

ನಟ, ಕೃಷಿ ಸಚಿವ ಬಿ. ಸಿ ಪಾಟೀಲ್ ಅವರು “ಕನ್ನಡ ಚಿತ್ರಲೋಕಕ್ಕೆ ಅಪಾರ ಸೇವೆ ಸಲ್ಲಿಸಿರುವ ಅಭಿಜಾತ ಕಲಾವಿದ, ಅಭಿಮಾನಿಗಳ ಪಾಲಿನ ದೇವು, ಡೈನಾಮಿಕ್ ಹೀರೋ ಶ್ರೀ ದೇವರಾಜ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಆಯುರಾರೋಗ್ಯ, ನೆಮ್ಮದಿ ಕರುಣಿಸಲಿ, ವೃತ್ತಿಜೀವನ ಮತ್ತು ವೈಯಕ್ತಿಕ ಜೀವನ ಇನ್ನಷ್ಟು ಉನ್ನತಕ್ಕೇರಲಿ ಎಂದು ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ನವರಸ ನಾಯಕ ಜಗ್ಗೇಶ್ ಅವರು “ಓಂಕಾರದಿಂದ ಜೊತೆಯಲ್ಲಿ ಕೆ.ವಿ.ರಾಜು ರವರ ಗರಡಿಯಲ್ಲಿ ಬೆಳೆದವರು..!! ಶುಭಮಸ್ತು ಎಂದು ಟ್ವೀಟ್ ಮಾಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.