ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಹೌದು, ವಿಜಯಪುರ ಜಿಲ್ಲೆಯ ವಿವಿಧೆಡೆ ಭೂಕಂಪನದ ಅನುಭವವಾಗಿದ್ದು, ಬೆಳಗ್ಗೆ 6.22ರಿಂದ 6.23ರ ವೇಳೆಗೆ ಭೂಮಿ 10 ಸೆಕೆಂಡ್ ಗೂ ಅಧಿಕ ಸಮಯ ಭೂಮಿ ಕಂಪಿಸಿದೆ ಎನ್ನಲಾಗಿದೆ.
ಅಲ್ಲದೆ, ಭೂಮಿಯೊಳಗಿಂದ ಭಾರೀ ಶಬ್ದ ಕೇಳಿಬಂದಿದ್ದು, ನಿದ್ರೆಯಿಂದ ಆಗ ತಾನೆ ಎದ್ದವರು ಆತಂಕದಿಂದ ಮನೆಯಿಂದ ಓಡಿ ಹೊರಬಂದಿದ್ದಾರೆ. ಭೂಕಂಪನದ ತೀವ್ರತೆ ಎಷ್ಟಿತ್ತು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. 2 ವರ್ಷಗಳಿಂದ ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪನದ ಅನುಭವ ಆಗುತ್ತಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.