2022-23ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, https://karresults.nic.in/slpuind.asp ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ಮಾ.9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.
ಇದನ್ನು ಓದಿ: PAN Card: ನಿಮ್ಮ ಬಳಿ ಪ್ಯಾನ್ ಕಾರ್ಡ್ ಇಲ್ಲವೇ? ಆನ್‌ಲೈನ್‌ನಲ್ಲಿ ಸುಲಭವಾಗಿ ಮನೆಯಲ್ಲೇ ಅರ್ಜಿ ಸಲ್ಲಿಸಿ..!
ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಈ ಬಾರಿ ಶೇ.74.67 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ ಶೇ. 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ. 61.88 ಫಲಿತಾಂಶ ಪ್ರಕಟವಾಗಿತ್ತು. ಈ ಬಾರಿಯದ್ದು ಇಲ್ಲಿಯವರೆಗಿನ ದಾಖಲೆಯಾಗಿದೆ.
ಪಿಯು ರಿಸಲ್ಟ್: ದಕ್ಷಿಣ ಕನ್ನಡ ಫಸ್ಟ್:
ಈ ಬಾರಿ ರಾಜ್ಯದಲ್ಲಿ 74.67% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ (95.33%) ಮೊದಲ ಸ್ಥಾನದಲ್ಲಿದ್ದು, ಉಡುಪಿ (95.24%) 2ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. 5,24,209 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಲಾ ವಿಭಾಗದಲ್ಲಿ 61.22%, ವಾಣಿಜ್ಯ ವಿಭಾಗದಲ್ಲಿ 75.89% ವಿಜ್ಞಾನ ವಿಭಾಗದಲ್ಲಿ 85.71% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಇದನ್ನು ಓದಿ: ಪಡಿತರದಾರರಿಗೆ ಭರ್ಜರಿ ಗುಡ್ ನ್ಯೂಸ್; ಇನ್ಮುಂದೆ ಆಧಾರ್ ಇದ್ದರೆ ಸಾಕು, ರೇಷನ್ ಕಾರ್ಡ್ ಇಲ್ಲದಿದ್ದರೂ ಪಡಿತರ ಅಕ್ಕಿ.!
ಪಿಯುಸಿ ರಿಸಲ್ಟ್, ಇವರೇ ಫಸ್ಟ್:
ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಅತಿ ಹೆಚ್ಚು ಅಂಕ ಪಡೆದವರ ಮಾಹಿತಿ ಬಹಿರಂಗವಾಗಿದೆ. ಕಲಾ ವಿಭಾಗದಲ್ಲಿ ಬೆಂಗಳೂರಿನ NMKRV ಕಾಲೇಜಿನ ತಬಸ್ಸುಮ್ (600ಕ್ಕೆ 593 ಅಂಕ), ವಿಜ್ಞಾನ ವಿಭಾಗದಲ್ಲಿ ಕೋಲಾರದ ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನ ಕೌಶಿಕ್ (600ಕ್ಕೆ 596 ಅಂಕ) , ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಅನನ್ಯಾ (600ಕ್ಕೆ 600 ಅಂಕ) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಫಲಿತಾಂಶ ನೋಡುವುದು ಹೇಗೆ:
ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಿ. ಇಲ್ಲಿ 2nd ಪಿಯುಸಿ ಫಲಿತಾಂಶವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಇಲ್ಲಿ ಹೊಸದೊಂದು ಪುಟ ತೆರೆದುಕೊಳ್ಳುತ್ತದೆ. ಈ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ನಮೂದಿಸಿ, ‘Submit’ ಬಟನ್ ಕ್ಲಿಕ್ ಮಾಡಿ. ಆಗ ನಿಮ್ಮ ಫಲಿತಾಂಶ ಕಾಣಿಸುತ್ತದೆ.
ಇದನ್ನು ಓದಿ: ದಿನಕ್ಕೆ ಕೇವಲ 30 ರೂಪಾಯಿ ಉಳಿತಾಯದೊಂದಿದೆ ಕೈಗೆ 5 ಲಕ್ಷ ರೂ, ಸರ್ಕಾರದ ಈ ಯೋಜನೆ ಸೂಪರ್!