ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.
ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೋಹಳ್ಳಿಯಲ್ಲಿ ಗ್ರಾಮಸ್ಥರೇ ನಿರ್ಮಿಸಿದ ಶಾಲೆ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಶೀಘ್ರದಲ್ಲೇ 8,600 ಶಾಲಾ ಕಟ್ಟಡಗಳ ನಿರ್ಮಾಣ ಮಾಡುವುದು. ಜತೆಗೆ, 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತದೆ. ಗ್ರಾಮಸ್ಥರೇ ಶಾಲಾ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.