ಹಿಜಾಬ್ ಅಥವಾ ಬೇರೆ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ. ಮಕ್ಕಳ ಹಾಲಿನಂತಹ ಮನಸ್ಸನ್ನು ಒಡೆಯಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಹೌದು, ಮಕ್ಕಳ ಮನಸ್ಸಿನಲ್ಲಿ ದ್ವೇಷದ ದಳ್ಳುರಿಯನ್ನು ಯಾರೂ ಬಿತ್ತಬಾರದು, ಅಂತಹ ಭಾವನೆಗಳನ್ನು ಯಾರೂ ಪ್ರೋತ್ಸಾಹಿಸಬಾರದು ಎಂದು ಹೇಳಿದ್ದು, ಮುಸ್ಲಿಂ ಮಕ್ಕಳಿಗೆ ಆ ದುಪಟ್ಟಾವನ್ನು ತಲೆಯ ಸೆರಗಿನ ರೀತಿ ಧರಿಸಲು ಅವಕಾಶ ಕೊಟ್ಟರೆ ಸಮಸ್ಯೆ ಮುಗಿಯುತ್ತದೆ. ಆಗ ಸಮವಸ್ತ್ರ ಬಿಟ್ಟು ಬೇರೆ ವಸ್ತ್ರ ಧರಿಸುವ ಅವಶ್ಯಕತೆ ಇರುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.