ಉರುಳಿಗೆ ಸಿಕ್ಕಿಬಿದ್ದ ಚಿರತೆ ರಕ್ಷಿಸಲು ಹರಸಾಹಸ: ಬೇಟೆಗಾರರನ್ನು ಬಂಧಿಸಲು ಕ್ರಮ

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕಳ್ಳ ಬೇಟೆಗಾರರು ಹಾಕಿರುವ ಬಲೆಯಲ್ಲಿ ಸಿಕ್ಕಿಬಿದ್ದ ಚಿರತೆಯೊಂದು ಜೀವನ್ಮರಣ ಹೋರಾಟ ನಡೆಸುತ್ತಿದೆ.  ಮೂಡಿಗೆರೆ ತಾಲ್ಲೂಕಿನ ಬಾಲೂರು ಬಳಿಯ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ಕಾಡು ಹಂದಿಯನ್ನು ಬೇಟೆಯಾಡಲು ಬಲೆ…

ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕಳ್ಳ ಬೇಟೆಗಾರರು ಹಾಕಿರುವ ಬಲೆಯಲ್ಲಿ ಸಿಕ್ಕಿಬಿದ್ದ ಚಿರತೆಯೊಂದು ಜೀವನ್ಮರಣ ಹೋರಾಟ ನಡೆಸುತ್ತಿದೆ.  ಮೂಡಿಗೆರೆ ತಾಲ್ಲೂಕಿನ ಬಾಲೂರು ಬಳಿಯ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ.

ಕಾಡು ಹಂದಿಯನ್ನು ಬೇಟೆಯಾಡಲು ಬಲೆ ಹಾಕಿದ ಕಳ್ಳ ಬೇಟೆಗಾರರು ಘಟನೆಯ ನಂತರ ಪರಾರಿಯಾಗಿದ್ದಾರೆ. ಮೂಡಿಗೆರೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಚಿರತೆಯನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ.  

ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಲಾಗುತ್ತಿದೆ.  ತಲೆಮರೆಸಿಕೊಂಡಿರುವ ಕಳ್ಳ ಬೇಟೆಗಾರರನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಲಾಗಿದೆ. ಅಕ್ರಮ ಬೇಟೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.