ಚುನಾವಣೆ ಹಿನ್ನಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಜೂನ್ 13 ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave…

college vijayaprabha news

2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಜೂನ್ 13 ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave ) ಘೋಷಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಜೂನ್ 13 ರಂದು ವಿಧಾನಪರಿಷತ್ತಿನ ವಾಯುವ್ಯ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರ ಹಾಗೂ ದಕ್ಷಿಣ ಪದವೀಧರ ಕ್ಷೇತ್ರ ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇನ್ನು, ಮತದಾನ ನಡೆಯಲಿರುವಂತ ವಾಯುವ್ಯ ಪದವೀಧರ ಕ್ಷೇತ್ರದ ಬಾಗಲಕೋಟೆ, ವಿಜಯಪುರ ಮತ್ತು ಬೆಳಗಾವಿ, ದಕ್ಷಿಣ ಪದವೀಧರ ಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು, ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ಈ ಚುನಾವಣೆ ಕ್ಷೇತ್ರವ್ಯಾಪ್ತಿಯಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು, ಅನುದಾನಿತ, ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು ಸೇರಿದಂತೆ ಖಾಸಗಿ ಕಾರ್ಖಾನೆಗಳು, ಸಹಕಾರಿ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾವುಗಳಿಗೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಜೂನ್ 13 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ, ಆದೇಶಿಸಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.