ಇಂದು ರಾಜ್ಯ ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಇನ್ನು, 2 ಪದವೀಧರ ಹಾಗು 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಇಂದು ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಿದೆ.
ಜೂನ್ 15 ರ ಬುಧವಾರದಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರುಣ್ ಶಹಾಪುರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಕಾಶ್ ಹುಕ್ಕೇರಿ ಸೇರಿದಂತೆ ಕೆಲವು ಘಟಾನುಘಟಿಗಳು ಕಣದಲ್ಲಿದ್ದಾರೆ.