ರಾಜ್ಯದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಬಿಸಿ ತಟ್ಟಲಿದ್ದು, ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿಯಾಗಲಿದ್ದು, ಪ್ರತಿ ಯೂನಿಟ್ ಮೇಲೆ 23-43 ಪೈಸೆವರೆಗೆ ಹೆಚ್ಚಿಸಿ KERC ಆದೇಶ ಹೊರಡಿಸಿದೆ.
ಹೌದು, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯುನಿಟ್ಗೆ 43 ಪೈಸೆ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕು. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 24 ಪೈಸೆ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 34 ಪೈಸೆ ಹಾಗು ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಏರಿಕೆ ಮಾಡಲು KPTCL ಆದೇಶಿಸಿದೆ.
ಕಲ್ಲಿದ್ದಲು ಖರೀದಿ ವೆಚ್ಚ ಹೆಚ್ಚಾಗಿದ್ದರಿಂದ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಿ ದರ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳ ನಷ್ಟ ಸರಿದೂಗಿಸಲು ದರ ಏರಿಕೆ ಮಾಡಿದ್ದು, ಇಂದಿನಿಂದ ಹೊಸ ವಿದ್ಯುತ್ ದರ ಜಾರಿಗೆ ಬರಲಿದೆ. ಮೊದಲೇ ದುಬಾರಿ ದುನಿಯಾದಿಂದ ರೋಸಿ ಹೋಗಿರುವ ಜನರಿಗೆ, ಕರೆಂಟ್ ಕೂಡ ಶಾಕ್ ಕೊಟ್ಟಿದೆ.