ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ಸಿಗಲಿದೆ ಉಚಿತ ಬೋರ್‌ವೆಲ್; ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ?

Ganga kalyana yojana : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯು (Ganga kalyana yojana) ರೈತರ ಜೀವನವನ್ನು ಸುಧಾರಿಸುವ ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ರಾಜ್ಯ ಸರ್ಕಾರದ…

Ganga kalyana yojana

Ganga kalyana yojana : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯು (Ganga kalyana yojana) ರೈತರ ಜೀವನವನ್ನು ಸುಧಾರಿಸುವ ಮತ್ತು ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ರಾಜ್ಯ ಸರ್ಕಾರದ ಉಪಕ್ರಮವಾಗಿದೆ. ಈ ಯೋಜನೆಯು ರೈತರಿಗೆ ಅವರ ಉತ್ಪಾದಕತೆ ಮತ್ತು ಆದಾಯವನ್ನು ಹೆಚ್ಚಿಸಲು ಆರ್ಥಿಕ ನೆರವು, ತಾಂತ್ರಿಕ ಬೆಂಬಲ ಮತ್ತು ಸಂಪನ್ಮೂಲಗಳನ್ನು ಒದಗಿಸುವತ್ತ ಗಮನ ಹರಿಸುತ್ತದೆ. ಈ ಯೋಜನೆ ಅಡಿಯಲ್ಲಿ ಎಲ್ಲಾ ಫಲಾನುಭವಿಗಳಿಗೆ ಪಂಪ್ ಸೆಟ್‌ನೊಂದಿಗೆ ಒಂದು ಕೊರೆದ ಬೋರ್‌ವೆಲ್ ಅಥವಾ ತೆರೆದ ಬಾವಿಯನ್ನು ಕೊರೆಸಬಹುದು.

ರಾಜ್ಯ ಸರ್ಕಾರದ ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಉದ್ದೇಶವೇನು? (Purpose of Ganga kalyana yojana)

Ganga kalyana yojana

ಕರ್ನಾಟಕ ಸರ್ಕಾರದ ಗಂಗಾ ಕಲ್ಯಾಣ ಯೋಜನೆಯ ಮುಖ್ಯ ಉದ್ದೇಶ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದಾಗಿದೆ. ಕಡಿಮೆ ಜಮೀನು ಹೊಂದಿರುವ ರೈತರು ಮಳೆಯ ನೀರನ್ನು ಅವಲಂಬಿಸಿಕೊಂಡು ಕೃಷಿ ಮಾಡುವುದು ಕಷ್ಟಕರವಾಗಿರುತ್ತದೆ. ಅವರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ ಪಂಪ್‌ – ಮೋಟಾರ್‌ ಮೂಲಕ ನೀರೆತ್ತಲು ಕೊಳವೆ ಬಾವಿ ಅಥವಾ ತೆರೆದ ಬಾವಿ ತೆಗೆಸುವುದರಿಂದ ವಾಣಿಜ್ಯ ಫಸಲುಗಳನ್ನು ಬೆಳೆದು, ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಅನುಕೂಲವಾಗುತ್ತದೆ.

Vijayaprabha Mobile App free

ಇದನ್ನೂ ಓದಿ: ಪೊಲೀಸ್‌ ಕುಟುಂಬಕ್ಕೆ ಭರ್ಜರಿ ಗುಡ್‌ನ್ಯೂಸ್‌ ನೀಡಿದ ಸರ್ಕಾರ; ಪೊಲೀಸರ ವಿಮಾ ಮೊತ್ತ ರೂ. 50 ಲಕ್ಷಕ್ಕೆ ಹೆಚ್ಚಳ!

ಗಂಗಾ ಕಲ್ಯಾಣ ಯೋಜನೆಗೆ ಈ ಎಲ್ಲಾ ನಿಗಮಗಳಿಂದ ಅರ್ಜಿ ಸಲ್ಲಿಸಬಹುದು (Ganga kalyana yojana application)

ರೈತರಿಗೆ ಕರ್ನಾಟಕ ಸರ್ಕಾರದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಹಲವಾರು ನಿಗಮಗಳನ್ನು ಆಯೋಜಿಸಲಾಗಿದೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ – ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಉಪ್ಪಾರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಬೋವಿ ಸಮುದಾಯದ ಅಭಿವೃದ್ಧಿ ನಿಗಮ. ಇದರ ಹೊರತಾಗಿ ಆನ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು.

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವವರು ಇವುಗಳನ್ನು ಅಗತ್ಯವಾಗಿ ಹೊಂದಿರಬೇಕು

ಗಂಗಾ ಕಲ್ಯಾಣ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಕೆಲವು ಅಗತ್ಯ ದಾಖಲಾತಿಗಳನ್ನು ತಪ್ಪದೆ ಹೊಂದಿರಬೇಕು. ಅವುಗಳೆಂದರೆ, ಜಾತಿ ಪ್ರಮಾಣ ಪ್ರತಿ, ಆದಾಯ ಪ್ರಮಾಣ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಆರ್.ಟಿ.ಸಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ,ಬ್ಯಾಂಕ್ ಪಾಸ್ ಬುಕ್ ಪ್ರತಿ, ಸಣ್ಣ ಅಥವಾ ಅತಿ ಸಣ್ಣ ಹಿಡುವಳಿದಾರ ದೃಢೀಕರಣ ಪತ್ರ, ಭೂ ಕಂದಾಯ ಪಾವತಿಸಿದ ರಸೀದಿ, ಸ್ವಯಂ ಘೋಷಣಾ ಪತ್ರ, ಜಾಮೀನುದಾರರ ಸ್ವಯಂ ಘೋಷಣಾ ಪತ್ರದ ಜೊತೆಗೆ ಫಲಾನುಭವಿಯು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು.

ಇದನ್ನೂ ಓದಿ: ಗರ್ಭಿಣಿಯರಿಗೆ, ಹಾಲುಣಿಸುವ ತಾಯಂದಿರಿಗೆ ಮಾತೃಶ್ರೀ ಯೋಜನೆಯಡಿ 12 ಸಾವಿರ ರೂ ; ಅರ್ಜಿ ಸಲ್ಲಿಕೆ ಹೇಗೆ?

ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆಗಳೇನು? (Eligibility of Ganga Kalyan Yojana)

  • ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  •  ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.
  • ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರರ ವಯಸ್ಸು 18 ರಿಂದ 55 ವರ್ಗಗಳ ಮಿತಿಯಲ್ಲಿರಬೇಕು.
  • ಸರ್ಕಾರದ/ನಿಗಮಗಳ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
  • ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ₹98,000 ಗಳ ಮಿತಿಯಲ್ಲಿರಬೇಕು.

ಗಂಗಾ ಕಲ್ಯಾಣ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? (How to apply for Ganga Kalyan Yojana)

  • ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್‌  https:/kmdc.karnataka.gov.in/ ಭೇಟಿ ನೀಡಿ
  • ಆನ್‌ಲೈನ್ ಸರ್ವಿಸಸ್ ಟ್ಯಾಬ್ ಮೇಲೆ ಸ್ಕಾಲ್ ಮಾಡಿ ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  • https://kmdc.karnataka.gov.in/info-3/ONLINE+APPLICA- TION/kn ಅಪ್ಲಿಕೇಶನ್ ಪುಟ ತೆರೆಯುತ್ತದೆ.
  • ನಂತರ ‘ಗಂಗಾ ಕಲ್ಯಾಣ ಯೋಜನೆ – ಅಪ್ಪೆ ಮಾಡಲು ಇಲ್ಲಿ ಕ್ಲಿಕ್ ಮಾಡಿ’ ಎಂಬ ಬಟನ್ ಒತ್ತಿ.
  • https://kmdc.kar.nic.in/loan/Login.aspx ಮಾಡಿ.
  • ನಂತರ KMDC ಕರ್ನಾಟಕ ಲೋನ್ ಲಾಗಿನ್ ಪುಟವು ಕಾಣಿಸಿಕೊಳ್ಳುತ್ತದೆ.
  • ಆನ್‌ಲೈನ್‌ ಅರ್ಜಿ ನಮೂನೆ ತೆರೆಯಲು “ಗಂಗಾ ಕಲ್ಯಾಣ ಯೋಜನೆ” ಲಿಂಕ್ 1 ಅನ್ನು ಕ್ಲಿಕ್ ಮಾಡಿ.
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.