Emergency declared in South Korea | ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ; ‘ತುರ್ತು ಸೇನಾ ಆಡಳಿತ’ ಘೋಷಣೆ ಯಾಕೆ?

Emergency declared in South Korea : ದಕ್ಷಿಣ ಕೊರಿಯಾದಲ್ಲಿ ಹಠಾತ್‌ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದ್ದು, ಅಲ್ಲಿನ ಅಧ್ಯಕ್ಷ ಯೂನ್ ಸುಕ್ ಯೆಲ್ ಇಂದು (ಮಂಗಳವಾರ) ರಾತ್ರಿ ದೂರದರ್ಶನ ಭಾಷಣದಲ್ಲಿ ತುರ್ತು ಮಿಲಿಟರಿ…

Emergency declared in South Korea

Emergency declared in South Korea : ದಕ್ಷಿಣ ಕೊರಿಯಾದಲ್ಲಿ ಹಠಾತ್‌ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದ್ದು, ಅಲ್ಲಿನ ಅಧ್ಯಕ್ಷ ಯೂನ್ ಸುಕ್ ಯೆಲ್ ಇಂದು (ಮಂಗಳವಾರ) ರಾತ್ರಿ ದೂರದರ್ಶನ ಭಾಷಣದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಣೆ ಮಾಡುವುದಾಗಿ ಪ್ರಕಟಿಸಿದ್ದಾರೆ.

ಹೌದು, ದಕ್ಷಿಣ ಕೊರಿಯಾದಲ್ಲಿ 1980ರ ಬಳಿಕ ಮೊದಲ ಬಾರಿಗೆ ಮಿಲಿಟರಿ ಆಡಳಿತ ಜಾರಿಗೆ ಬಂದಿದೆ. ಈ ಸಮಯದಲ್ಲಿ ಸಂಸತ್ತು ಮತ್ತು ರಾಜಕೀಯ ಪಕ್ಷಗಳ ಚಟುವಟಿಕೆಗಳನ್ನು ನಿಷೇಧಿಸಲಾಗಿದ್ದು, ಮಾಧ್ಯಮಗಳು ಮಿಲಿಟರಿ ನಿಯಂತ್ರಣದಲ್ಲಿರುತ್ತವೆ ಎಂದು ವರದಿಯಾಗಿದೆ.

ಇದನ್ನೂ ಓದಿ: Heavy rain | ಫೆಂಗಲ್ ಚಂಡಮಾರುತದ ಎಫೆಕ್ಟ್‌; ರಾಜ್ಯದಲ್ಲಿ ಇನ್ನೆರಡು ದಿನ ಮಳೆ

Vijayaprabha Mobile App free

Emergency declared in South Korea : ಸಂವಿಧಾನವನ್ನು ರಕ್ಷಿಸಲು ತುರ್ತು ಪರಿಸ್ಥಿತಿ ಘೋಷಣೆ: ಅಧ್ಯಕ್ಷ ಯೂನ್

ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಕ್ಷರು ಮಿಲಿಟರಿ ಕಾನೂನನ್ನು ಘೋಷಿಸಿದ ನಂತರ ದಕ್ಷಿಣ ಕೊರಿಯಾದ ಸಂಸತ್ತಿನ ಹೊರಗೆ ಪ್ರತಿಭಟನೆಗಳು ನಡೆಯುತ್ತಿವೆ.

ತುರ್ತು ಪರಿಸ್ಥಿತಿ ಘೋಷಣೆ ಮುನ್ನ ಅಧ್ಯಕ್ಷ ಯೂನ್ ಸುಕ್ ಯೋಲ್ ಮಾತನಾಡಿ, ದೇಶದ ಸಂವಿಧಾನ & ಕಾನೂನನ್ನು ಉಳಿಸಲು ಈ ಹೆಜ್ಜೆ ಅಗತ್ಯ ಎಂದಿದ್ದಾರೆ. ಅಧ್ಯಕ್ಷ ಯುನ್ 2022ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಂದಿನಿಂದ ತೀವ್ರ ವಿರೋಧದಿಂದಾಗಿ ಅವರು ತಮ್ಮ ನೀತಿಗಳನ್ನು ಕಾರ್ಯಗತಗೊಳಿಸಲು ತೊಂದರೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: Heavy rain holiday | ಶಾಲಾ-ಕಾಲೇಜುಗಳಿಗೆ ಇಂದು ಕೂಡ ರಜೆ ಇದೆಯೇ?

Emergency declared in South Korea : ದ.ಕೊರಿಯಾದಲ್ಲಿ ‘ತುರ್ತು ಸೇನಾ ಆಡಳಿತ’ ಘೋಷಣೆ ಯಾಕೆ?

ವಿರೋಧ ಪಕ್ಷಗಳು ಸಂಸತ್ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ದೇಶದಲ್ಲಿ ಮಂಗಳವಾರದಿಂದಲೇ ‘ತುರ್ತು ಸೇನಾ ಆಡಳಿತ’ವನ್ನು ಜಾರಿಗೊಳಿಸಿದ್ದಾರೆ.

‘ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉ.ಕೊರಿಯಾ ಯತ್ನಿಸುತ್ತಿದೆ’ ಎಂದು ಆರೋಪಿಸಿದ್ದು, ‘ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ’ ಎಂದು ತಿಳಿಸಿದ್ದಾರೆ.

ದೇಶದ ಜನರೇ ಬನ್ನಿ! ಹೋರಾಡೋಣ; ದಕ್ಷಿಣ ಕೊರಿಯಾ ವಿಪ ನಾಯಕನ ಕರೆ..

ದಕ್ಷಿಣ ಕೊರಿಯಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಹಿನ್ನೆಲೆಯಲ್ಲಿ ಅಲ್ಲಿನ ಪ್ರತಿಪಕ್ಷ ಡೆಮಾಕ್ರಟಿಕ್ ಪಕ್ಷದ ನಾಯಕ ಲೀ ಜೇ-ಮ್ಯುಂಗ್ ಅವರು ಮಿಲಿಟರಿ ಆಡಳಿತವನ್ನು ಹೇರುವ ಅಧ್ಯಕ್ಷರ ನಿರ್ಧಾರದ ವಿರುದ್ಧ ಪ್ರತಿಭಟಿಸುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ.

ಅಲ್ಲದೆ, ವಿಧಾನಸಭೆಯ ಸದಸ್ಯರು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ನಡೆಸಲು ಆದೇಶಿಸಿದ್ದಾರೆ. ಮತ್ತೊಂದೆಡೆ, ಆಡಳಿತಾರೂಢ ಪೀಪಲ್ಸ್ ಪವರ್ ಪಕ್ಷದ ನಾಯಕ ಹ್ಯಾನ್ ಡಾಂಗ್-ಹೂನ್ ಕೂಡ ಮಿಲಿಟರಿ ಆಡಳಿತದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.