ರಾಷ್ಟ್ರೀಯ ಆರೋಗ್ಯ ಮಿಷನ್‌ನ ಒಳಗುತ್ತಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಎಸ್ಮಾ ಜಾರಿಗೊಳಿಸಿ, ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲವೇ ಇಲಾಖೆ ನೌಕರರು ಕಾನೂನಾತ್ಮಕ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಇದನ್ನು ಓದಿ: ಆಧಾರ್ ಕಾರ್ಡ್‌ನಲ್ಲಿ ಏನನ್ನಾದರೂ ನವೀಕರಿಸಬೇಕೇ, ಈ ಸಂಖ್ಯೆಗೆ ಫೋನ್ ಕರೆ ಮಾಡಿ
ಒಂದು ತಿಂಗಳಿಂದ ರಾಷ್ಟ್ರೀಯ ಆರೋಗ್ಯ ಮಿಷನ್‌ನ ಒಳಗುತ್ತಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿದೆ ಎಂದು ಇಲಾಖೆ ಹೇಳಿದೆ.
ಇದನ್ನು ಓದಿ: ಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆ
ಎಸ್ಮಾ ಎಂದರೇನು?
ಎಸ್ಮಾ ಎಂದರೆ ಅಗತ್ಯ ಸೇವೆ ನಿರ್ವಹಣೆ ಕಾಯ್ದೆ ಎಂದರ್ಥ. ಇದು ಸರ್ಕಾರಿ ನೌಕರರನ್ನು ನಿಯಂತ್ರಣ ಮಾಡುವ ಕಾಯ್ದೆಯಾಗಿದೆ. ಈ ಕಾಯ್ದೆ 1968ರಿಂದ ಚಾಲ್ತಿಯಲ್ಲಿದ್ದು, ಕರ್ನಾಟಕದಲ್ಲಿ ಎಸ್ಮಾ ಕುರಿತು 1994ರಲ್ಲಿ ಕಾನೂನಿನ ಮೊದಲ ರೂಪುರೇಷೆ ತಯಾರಾಯಿತು.
2013ರ ಜೂನ್‌ನಿಂದ ರಾಜ್ಯದಲ್ಲಿ ಕಾನೂನಾಗಿ ಮಾರ್ಪಾಡಾಯಿತು. ನಂತರ ಎಸ್ಮಾಗೆ 2015ರಲ್ಲಿ ಸರ್ಕಾರ ಕೆಲ ತಿದ್ದುಪಡಿ ಮಾಡಲಾಗಿದೆ. ಈಗ ರಾಜ್ಯದಲ್ಲಿ NHM ಒಳಗುತ್ತಿಗೆ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ.
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?