Ex CM ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ…

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ- ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಕೃಷ್ಣ ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಸಾಮಾಜಿಕ ಜಾಲತಾಣ X ನಲ್ಲಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply