ದುಬೈನಲ್ಲಿ ನಡೆದ ಏಷ್ಯಾ ಕಪ್ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಮೊಹಮ್ಮದ್ ರಿಜ್ವಾನ್ ಅರ್ಧಶತಕ ಹಾಗೂ ಮೊಹಮ್ಮದ್ ನವಾಜ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಪಾಕಿಸ್ತಾನ ತಂಡವು ಭಾರತದ ವಿರುದ್ಧ 5 ವಿಕೆಟ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಹೌದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತವು 7 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಿತ್ತು. ತಂಡದ ಪರ ವಿರಾಟ್ ಕೊಹ್ಲಿ 60 ರನ್, ಕೆ.ಎಲ್.ರಾಹುಲ್ 28 ರನ್, ರೋಹಿತ್ ಶರ್ಮಾ 28, ದೀಪಕ್ ಹೂಡಾ 16 ರನ್ ಗಳಿಸಿದರು. ಇನ್ನು ಪಾಕಿಸ್ತಾನದ ಪರ ಶಾದಾಬ್ ಖಾನ್ 2 ವಿಕೆಟ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಹ್ಯಾರಿಸ್ ರೌಫ್ ಹಾಗೂ ಮೊಹಮ್ಮದ್ ನವಾಜ್ ತಲಾ 1 ವಿಕೆಟ್ ಪಡೆದುಕೊಂಡರು.
ಬಳಿಕ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು 19.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಗೆಲುವು ಸಾಧಿಸಿದೆ. ತಂಡದ ಪರ ಮೊಹಮ್ಮದ್ ರಿಜ್ವಾನ್ 71 ರನ್ ಹಾಗೂ ಮೊಹಮ್ಮದ್ ನವಾಜ್ 42, ಆಸೀಫ್ ಅಲಿ 16, ಬಾಬರ್ ಅಜಂ 14, ಫಕರ್ ಜಮಾನ್ 15 ರನ್ ಗಳಿಸಿದರು. ಭಾರತ ಪರ ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಈ ಪಂದ್ಯದಲಿ ಚಹಾಲ್ 4 ಓವರ್ ಬೌಲಿಂಗ್ ಮಾಡಿ 43 ರನ್ ಹಾಗೂ ಹಾರ್ದಿಕ್ ಪಾಂಡ್ಯ 4 ಓವರ್ ಬೌಲಿಂಗ್ ಮಾಡಿ 44 ರನ್ ಕೊಟ್ಟು ದುಬಾರಿಯಾದರು. ಇನ್ನು ಪಾಕಿಸ್ತಾನ ಪರ ಅದ್ಬುತ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಮ್ಮದ್ ರಿಜ್ವಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.