ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದೆಯೇ? ಅಗಾದರೆ ನೀವು ಖಚಿತವಾಗಿ ಒಂದು ವಿಷಯವನ್ನು ತಿಳಿದಿರಬೇಕು. ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಬೇಕು. ಪ್ಯಾನ್ ಆಧಾರ್ ಲಿಂಕ್ ಮಾಡದಿದ್ದರೆ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರಿಂದ ಪ್ಯಾನ್ ಕಾರ್ಡ್ ಕಾರ್ಯನಿರ್ವಹಿಸದಿರಲು ಕಾರಣವಾಗಬಹುದು. ಹಾಗೆ ಭಾರೀ ದಂಡವನ್ನು ಭರಿಸಬೇಕಾಗಬಹುದು.
ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಮಾರ್ಚ್ 31 ಕ್ಕೆ ಮುಕ್ತಾಯಗೊಳ್ಳುಲಿದ್ದು, ನೀವು ತಕ್ಷಣ ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿಕೊಳ್ಳಬೇಕು. ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ಮಾನ್ಯವಾಗಿಲ್ಲದಿರಬಹುದು. ಇದರಿಂದ ಭಾರಿ ದಂಡಕ್ಕೆ ಕಾರಣವಾಗಬಹುಡಾಗಿದ್ದ, 10,000 ರೂ. ದಂಡ ಬೀಳಬಹುದು.
ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಹೊಂದಿಲ್ಲದಿದ್ದರೆ, ಪ್ಯಾನ್ ಕಾರ್ಡ್ ಮಾನ್ಯವಾಗಿಲ್ಲದಿರಬಹುದಾಗಿದ್ದು, ಇದರಿಂದ ನೀವು ಪ್ಯಾನ್ ಕಾರ್ಡ್ ಬಳಸಲು ಸಾಧ್ಯವಾಗುವುದಿಲ್ಲ. ಅಂದರೆ ನೀವು ಬ್ಯಾಂಕ್‌ಗೆ ಹೋಗಿ 50,000 ರೂ.ಗಿಂತ ಹೆಚ್ಚಿನ ಹಣವನ್ನು ಲೇವಾದೇವಿ ಮಾಡಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ನೀವು ದಂಡ ಪಾವತಿಸಬೇಕಾಗುತ್ತದೆ.
ಆದಾಯ ತೆರಿಗೆ ವೆಬ್‌ಸೈಟ್‌ಗೆ ಹೋಗುವ ಮೂಲಕ ನೀವು ಸುಲಭವಾಗಿ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಬಹುದು. ನೀವು ಮಾಡಬೇಕಾಗಿರುವುದು ಪ್ಯಾನ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ನೆನಪಿನಲ್ಲಿಟ್ಟುಕೊಂಡರೆ ಸಾಕು. ಈ ಎರಡನ್ನು ತಕ್ಷಣ ಲಿಂಕ್ ಮಾಡಬಹುದು. ಈಗಾಗಲೇ ಲಿಂಕ್ ಹೊಂದಿದವರಿಗೆ ಯಾವುದೇ ಸಮಸ್ಯೆ ಇಲ್ಲ. ಇಲ್ಲದಿದ್ದರೆ, ಈಗಿನಿಂದಲೇ ಈ ಕೆಲಸ ಮಾಡಿ.