ಶಿವಮೊಗ್ಗದ ರೈಲ್ವೇ ಕ್ರಷರ್ ನಲ್ಲಿ ಸ್ಫೋಟ ಪ್ರಕರಣ: ಗುತ್ತೆಗೆದಾರ ಸುಧಾಕರ್, ಜಿಲಿಟಿನ್ ಪೂರೈಕೆದಾರನ ಬಂಧನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಬ್ಬಲಗೇರಿ ಹತ್ತಿರ ರೈಲ್ವೇ ಕ್ರಷರ್ ನಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಕಲ್ಲು ಗಣಿಗಾರಿಕೆಯ ಗುತ್ತಿಗೆದಾರ ಸುಧಾಕರ್ & ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಎಂಬುವರನ್ನು…

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಬ್ಬಲಗೇರಿ ಹತ್ತಿರ ರೈಲ್ವೇ ಕ್ರಷರ್ ನಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಕಲ್ಲು ಗಣಿಗಾರಿಕೆಯ ಗುತ್ತಿಗೆದಾರ ಸುಧಾಕರ್ & ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಎಂಬುವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಅಬ್ಬಲಗೆರೆ–ಹುಣಸೋಡು ನಡುವೆ ಇರುವ ಜಲ್ಲಿ ಕ್ರಷರ್‌ ಬಳಿಯಲ್ಲಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಡೈನಾಮೈಟ್‌ ನಿನ್ನೆ ರಾತ್ರಿ ಸ್ಫೋಟಿಸಿ, ಇಲ್ಲಿವರೆಗೆ ಸುಮಾರು 15 ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಸ್ಫೋಟದ ತೀವ್ರತೆಗೆ ಮೃತ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ ಎಂದು ತಿಳಿದು ಬಂದಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಅವರು ತನಿಖೆಗೆ ಆದೇಶ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.