ಬೆಂಗಳೂರು: ಬೆಂಗಳೂರಿನಲ್ಲಿ ಮತ್ತು ಹೆಚ್ಚು ಕರೋನ ಪ್ರಕರಣಗಳಿರುವ ಬೇರೆ ಜಿಲ್ಲೆಗಳಿಗೆ ಪ್ರತ್ಯೇಕ ನಿಯಮಗಳನ್ನು ತರಲಾಗುತ್ತದೆ. ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಜನ ಗುಂಪು ಸೇರುವುದರಿಂದಲೇ ಕರೋನ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ಲೋಸ್ಡ್ ಸರ್ಕ್ಯೂಟ್ನಲ್ಲಿ ಗುಂಪಿದ್ರೆ ಗಾಳಿ ಮೂಲಕವೂ ವೈರಸ್ ಹರಡುತ್ತದೆ ಎಂದು ಸಚಿವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈಗಿನ ಪರಿಸ್ಥಿತಿಗೆ ಜನರೇ ಕಾರಣ:
ರಾಜ್ಯದಲ್ಲಿರುವ ಕೊರೋನಾ ಪರಿಸ್ಥಿತಿಗೆ ಜನರೇ ಕಾರಣ ಎಂದು ಹೇಳಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ಸರ್ಕಾರ ಎಷ್ಟು ಬಾರಿ ಎಚ್ಚರಿಸಿದರೂ ಜನರು ಎಚ್ಚೆತ್ತುಕೊಳ್ಳಲಿಲ್ಲ, ಹಾಗಾಗಿ ಇಂದು ಈ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ, ಜನರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಒದಗಿಸಲು ಆಗುತ್ತಿಲ್ಲ ಎಂದ ಅವರು, ವಿಪಕ್ಷಗಳ ಆರೋಪ ಅಲ್ಲಗೆಳೆಯುವುದಿಲ್ಲ ಹಾಗೂ ವಾಸ್ತವ ಏನಿದೆಯೋ ಅದನ್ನು ಒಪ್ಪಿಕೊಳ್ಳಬೇಕು ಎಂದರು.