ನವದೆಹಲಿ : ಕೇಂದ್ರ ಸರ್ಕಾರದ ಭಾರತ ಸರ್ಕಾರ ವಾಣಿಜ್ಯ ಮತ್ತು ಕೈಗಾರಿಕಾ ವಾಣಿಜ್ಯ ಸಚಿವಾಲಯ ಮತ್ತು ವಿದೇಶಾಂಗ ವ್ಯಾಪಾರ ನಿರ್ದೇಶನಾಲಯವು (ಡಿಜಿಎಫ್‌ಟಿ) ಈರುಳ್ಳಿ ರಫ್ತು ನೀತಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ, ಆಂದ್ರದಲ್ಲಿ ಮಳೆಯಿಂದ ಈರುಳ್ಳಿ ಬೆಲೆ ಹನಿ ಹಿನ್ನಲೆ ದೇಶದಲ್ಲಿ ಒಂದು ತಿಂಗಳಲ್ಲಿ ಮೂರೂ ಪಟ್ಟು ಈರುಳ್ಳಿ ಬೆಲೆ ಹೆಚ್ಚಾಗಿದ್ದು. ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಲೇಷ್ಯಾಗೆ ರಫ್ತ್ತು ನಿಷೇದ ಹೇರಿದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಈರುಳ್ಳಿ ರಫ್ತ್ತು ಮಾಡುವ ದೇಶ ಭಾರತ.
ಪುಡಿ ರೂಪದಲ್ಲಿ ಕತ್ತರಿಸಿದ, ಅಥವಾ ಒಡೆದ ಈರುಳ್ಳಿಗಳು ಮತ್ತು ಬೆಂಗಳೂರು ಗುಲಾಬಿ ಈರುಳ್ಳಿ ಮತ್ತು ಕೃಷ್ಣಪುರಂ ಈರುಳ್ಳಿ ಹೊರತುಪಡಿಸಿ ಎಲ್ಲಾ ಬಗೆಯ ಈರುಳ್ಳಿಯನ್ನು ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇದ ಹೇರಿದೆ.
ಈ ಬಗ್ಗೆ ವಿದೇಶಾಂಗ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್‌ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment