ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಹೌದು, ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದು, ದುಡಿಯುವ ವರ್ಗಕ್ಕೆ ಸಹಾಯ ಮಾಡಲು ಕೂಲಿಕಾರರ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಸಲುವಾಗಿ 4 ಸಾವಿರ ವಿಶೇಷ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇನ್ನು, ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕೈಗೊಳ್ಳಲಾಗಿದ್ದು, ಕರಕುಶಲ ಕಾರ್ಮಿಕರಿಗೆ 50 ಸಾವಿರ ರೂ.ಗಳ ಯೋಜನೆ ರೂಪಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.