ಪುದುಚೆರಿ: ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೆರಿಯಲ್ಲಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಿದೆ.
ಕಳೆದ ವಾರ ಇಬ್ಬರು ಶಾಸಕರು ಸೇರಿ ಒಟ್ಟು 5 ಜನ ಶಾಸಕರು ರಾಜೀನಾಮೆ ನೀಡಿದ್ದ ಬಳಿಕ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಫೆಬ್ರುವರಿ 22 ರಂದು ಮುಖ್ಯಮಂತ್ರಿಗೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದರು.
ಗವರ್ನರ್ ತಮಿಳಿಸೈ ಸೌಂದರರಾಜನ್ ಅವರ ಸೂಚನೆಯಂತೆ ಸಿಎಂ ನಾರಾಯಣಸ್ವಾಮಿ ಇಂದು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದು, ಪುದುಚೆರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.