ಸರ್ಕಾರ ರೈತರಿಗೆ ವಿದ್ಯುತ್ ಶಾಕ್ ನೀಡಿದ್ದು, ಕೃಷಿ ಪಂಪ್‌ಸೆಟ್ ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಸೌಲಭ್ಯಕ್ಕೆ ರಾಜ್ಯ ಸರ್ಕಾರ ಕತ್ತರಿ ಹಾಕಿದೆ.
ಹೌದು, ದಿನಕ್ಕೆ 7 ಗಂಟೆ ತ್ರೀ ಫೇಸ್ ವಿದ್ಯುತ್ ಪೂರೈಸುವುದು ಕೂಡ ಕಷ್ಟವಾಗಲಿದೆ. ಯಾಕೆಂದರೆ ಕೃಷಿ ಪಂಪ್‌ಸೆಟ್‌ಗಳಿಗೆ 21,333 ಮಿಲಿಯನ್ ಯುನಿಟ್ ವಿದ್ಯುತ್ ಬೇಕು. ಇದಕ್ಕೆ ರಾಜ್ಯ ಸರ್ಕಾರ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳಿಗೆ 16 ಸಾವಿರ ಕೋಟಿ ಸಹಾಯಧನ ನೀಡಬೇಕು.
ಆದರೆ, ಪ್ರಸಕ್ತ ವರ್ಷ ಸರ್ಕಾರ ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳಿಗೆ 12 ಸಾವಿರ ಕೋಟಿ ಮಾತ್ರ ನೀಡಿದ್ದು, ಹೆಚ್ಚುವರಿ ವಿದ್ಯುತ್‌ಗೆ ರೈತರು ಮೀಟರ್ ಅಳವಡಿಸಿಕೊಂಡು, ಶುಲ್ಕ ಭರಿಸಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.