ಅಟಲ್ಜೀ ಜನಸ್ನೇಹಿ ಕೇಂದ್ರದ ಮೂಲಕ ವಿತರಿಸುವ ವಿವಿಧ ಪ್ರಮಾಣಪತ್ರಗಳ ಶುಲ್ಕ ಏರಿಕೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಹೌದು, ಜಾತಿ, ಆದಾಯ ಪ್ರಮಾಣಪತ್ರ ಸೇರಿದಂತೆ ಇತರೆ ಪ್ರಮಾಣಪತ್ರಗಳ ಶುಲ್ಕವನ್ನು 25 ರೂ. ರಿಂದ 40 ರೂ. ಏರಿಸಲಾಗಿದ್ದು, ಇದು ಫೆಬ್ರುವರಿ 7 ರಿಂದಲೇ ಅನ್ವಯವಾಗಲಿದೆ.
ಇನ್ನು, ಸಾಧಾರಣ ಅಂಚೆ ಮೂಲಕ ಪ್ರಮಾಣಪತ್ರ ಪಡೆಯುವುದಕ್ಕೆ 45 ರೂ. ನೋಂದಾಯಿತ ಅಂಚೆಗೆ 60 ರೂ., ತ್ವರಿತ ಅಂಚೆಗೆ 70 ರೂ. ಶುಲ್ಕ ನಿಗದಿಪಡಿಸಲಾಗಿದೆ. ಅಟಲ್ಜೀ ಜನಸ್ನೇಹಿ ಕೇಂದ್ರದ ಅಡಿ ನಾಡ ಕಚೇರಿಯಲ್ಲಿ 54 ವಿವಿಧ ಸೇವೆಗಳನ್ನು ಒದಗಿಸಲಾಗುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.