ಬೆಂಗಳೂರು: ಫೆಂಗಲ್ ಚಂಡಮಾರುತ ಅಬ್ಬರಕ್ಕೆ ಭಾರೀ ಮಳೆ ಹಾಗೂ ವಿಪರೀತ ಚಳಿ ಮುಂದುವರೆದ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಸೋಮವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.
ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸೋಮವಾರ(ಡಿ.2) ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ನಾಳಿನ ರಜೆಯನ್ನು ಮುಂದಿನ ಇತರೆ ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಸೋಮವಾರ(ಡಿ.2) ಎಂದಿನಂತೆಯೇ ಶಾಲಾ, ಕಾಲೇಜುಗಳು ನಡೆಯಲಿವೆ. ಬೆಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ನಗರದಲ್ಲಿ ತುಂತುರು ಮಳೆ, ಮೋಡ ಕವಿದ ವಾತಾವರಣ ಇರುವ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸುವಂತೆ ಸೂಚನೆ ನೀಡಿದ್ದಾರೆ.