ದಾವಣಗೆರೆ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಮುಖಾಂತರ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಜಿ ವ್ಯಾಸಾಂಗ ಮಾಡಲು ಹಣಕಾಸಿನ ನೆರವನ್ನು ವಿದ್ಯಾರ್ಥಿವೇತನ ರೂಪದಲ್ಲಿ (2022-23 ಶೈಕ್ಷಣಿಕ ವರ್ಷಕ್ಕೆ ಜಾಗತಿಕ ವಿಶ್ವ ಶ್ರೇಯಾಂಕ ಪಟ್ಟಿಯ ಅನುಸಾರ ಪುರುಷ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಟಾಪ್ 100 ವಿಶ್ವವಿದ್ಯಾಲಯಗಳನ್ನು ಪರಿಗಣಿಸಲಾಗುತ್ತದೆ) ನೀಡಲಾಗುತ್ತದೆ.
ಕರ್ನಾಟಕ ರಾಜ್ಯ ನಿವಾಸದ ಆಸಕ್ತ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಫಿಖ್, ಬೌದ್ಧ, ಪಾರ್ಸಿ) ವಿದ್ಯಾರ್ಥಿಗಳು http://103.138.196.8/nos/ ಅಂಕ್ ಮೂಲಕ ದಾಖಲೆಗಳೊಂದಿಗೆ ಅನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು, ಅಧಿಕೃತ ವೆಬ್ಸೈಟ್ https://dom.karnataka.gov.in ಗೆ ಬೇಟಿ ನೀಡಬಹುದು ಎಂದು ದಾವಣಗೆರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.