ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ಹೌದು, ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: ಇನ್ಮುಂದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ಕಟ್; ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ
ಇದರಲ್ಲಿ ವಿನಯ್ ಕುಲಕರ್ಣಿ A1 ಆರೋಪಿ, ಅವರ ಆಪ್ತ ಸಹಾಯಕ ಅರ್ಜುನ್ A2 ಆರೋಪಿ ಎಂದು ಹೆಸರಿಸಲಾಗಿದ್ದು, ದೂರಿನ ಆಧಾರದಲ್ಲಿ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506, 504, 201, 366, 376, 323, 354 ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರತಿದೂರು ದಾಖಲಿಸಿದ್ದ ಶಾಸಕ ವಿನಯ್ ಕುಲಕರ್ಣಿ
ಇನ್ನು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ತಮ್ಮ ಮೇಲಿರುವ ಅತ್ಯಾಚಾರ ಮತ್ತು ಕಿರುಕುಳದ ಆರೋಪಗಳನ್ನು ತಳ್ಳಿಹಾಕಿದ್ದು, ಮಹಿಳೆ ಮತ್ತು ಖಾಸಗಿ ಸುದ್ದಿ ವಾಹಿನಿ ಮುಖ್ಯಸ್ಥರೊಬ್ಬರ ವಿರುದ್ಧ ಸುಲಿಗೆ ಮತ್ತು ಬೆದರಿಕೆ ಆರೋಪದ ಮೇಲೆ ಪ್ರತಿದೂರು ದಾಖಲಿಸಿದ್ದಾರೆ.
ಇದನ್ನೂ ಓದಿ: ವಿಜಯದಶಮಿಗೆ ಗಗನಕ್ಕೇರಿದ ಹೂವು-ಹಣ್ಣುಗಳ ಬೆಲೆ; ರಾಜ್ಯದಲ್ಲಿ ಎಷ್ಟಿದೆ ಗೊತ್ತಾ ಬೆಲೆ?
2 ಕೋಟಿ ರೂ. ಕೊಟ್ಟರೆ ಮಹಿಳೆಯೊಬ್ಬಳ ಮೂಲಕ ಮಾಡಿಸಿದ ವಿಡಿಯೋ ಮತ್ತು ಆಡಿಯೋವನ್ನುವನ್ನು ಪ್ರಸಾರ ಮಾಡುವುದಿಲ್ಲ ಎಂಬುದಾಗಿ ಹೇಳಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಸಂಜಯನಗರ ಠಾಣೆಗೆ ವಿನಯ್ ಕುಲಕರ್ಣಿ ಪ್ರತಿ ದೂರು ನೀಡಿದ್ದಾರೆ.