ಪುಣೆ : ಪುಣೆಯ ಹಡಪ್ಸರ್ ಬಳಿಯ ಮಂಜರಿಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ಗುರುವಾರ ಅಗ್ನಿ ಅನಾಹುತ ಸಂಭವಿಸಿದೆ. ಕಂಪನಿಯ ಟರ್ಮಿನಲ್ 1 ಗೇಟ್ ಬಳಿ ಅಗ್ನಿ ಕಾಣಿಸಿಕೊಂಡಿದ್ದು, ಘಟನಾ ಸ್ಥಳಕ್ಕೆ ತಲುಪಿರುವ 10 ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.
ಭಾರತದಲ್ಲಿ ಅನುಮೋದನೆ ಪಡೆದಿರುವ ಎರಡು ಕೊರೋನಾ ಲಸಿಕೆಗಳ ಪೈಕಿ ಒಂದಾಗಿರುವ ‘ಕೋವಿಶೀಲ್ಡ್’ ಲಸಿಕೆಯನ್ನು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಸಹಯೋಗದೊಂದಿಗೆ ತಯಾರಿಸಿದೆ ಎಂಬುದು ಇಲ್ಲಿ ಗಮನಾರ್ಹವಾಗಿದೆ. ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಈಗಾಗಲೇ ಸುಮಾರು 10 ಕೋಟಿ (100 ಮಿಲಿಯನ್) ಪ್ರಮಾಣದ ಲಸಿಕೆಗಳನ್ನು ಅಭಿವೃದ್ಧಿ ಪಡಿಸಿದೆ ಎಂದು ವರದಿಯಾಗಿದೆ.
Maharashtra: Fire breaks out at Terminal 1 gate of Serum Institute of India in Pune. More details awaited. pic.twitter.com/RnjnNj37ta
— ANI (@ANI) January 21, 2021