ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪತ್ತೆ: ಸೋಂಕಿತನಿಗೆ ಟ್ರಾವೆಲ್​ ಹಿಸ್ಟರಿನೇ ಇಲ್ಲ!

ಜಾಗತಿಕ ಸೋಂಕು ಮಂಕಿಪಾಕ್ಸ್ ಭಾರತದಲ್ಲಿ ನಿಧಾನವಾಗಿ ಹೆಜ್ಜೆ ಇಡುತ್ತಿದೆ. ಇಂದು ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆಯಾಗಿದ್ದು, ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ವ್ಯಕ್ತಿಗೆ ವೈರಸ್ ಪತ್ತೆಯಾಗಿದೆ. ಆದ್ರೆ ದೆಹಲಿಯಲ್ಲಿ…

monkeypox vijayaprabha news

ಜಾಗತಿಕ ಸೋಂಕು ಮಂಕಿಪಾಕ್ಸ್ ಭಾರತದಲ್ಲಿ ನಿಧಾನವಾಗಿ ಹೆಜ್ಜೆ ಇಡುತ್ತಿದೆ. ಇಂದು ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆಯಾಗಿದ್ದು, ನಗರದ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿಗೆ ದಾಖಲಾಗಿರುವ ವ್ಯಕ್ತಿಗೆ ವೈರಸ್ ಪತ್ತೆಯಾಗಿದೆ.

ಆದ್ರೆ ದೆಹಲಿಯಲ್ಲಿ ಪತ್ತೆಯಾದ ಸೋಂಕಿತ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಶಾಕಿಂಗ್ ಆಗಿದೆ. 31 ವರ್ಷದ ವ್ಯಕ್ತಿ ಇತ್ತೀಚೆಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ನಡೆದ ಸ್ಟಾಗ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಜ್ವರ ಮತ್ತು ಚರ್ಮದ ಗಾಯಗಳಿಂದ ಬಳಲುತ್ತಿದ್ದ ಅವರನ್ನು ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮಾದರಿಯನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಮಂಕಿಪಾಕ್ಸ್ ವೈರಸ್ ದೃಢವಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದ್ದು, ಜಾಗತಿಕವಾಗಿ ವೈರಸ್ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದ್ದು, 75 ದೇಶಗಳಿಗೆ ವ್ಯಾಪಿಸಿದೆ.

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.