ಉತ್ತರ ಪ್ರದೇಶದ ರಾಂಪುರ ತಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ತಾಂಡಾ ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು, ಮೃತರು ಇಕೋ ಕಾರಿನಲ್ಲಿ ಹೋಗುತ್ತಿದ್ದರು ಎನ್ನಲಾಗಿದ್ದು, ಈ ಕಾರಿಗೆ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂದು ಇನ್ನೂ ಖಚಿತವಾಗಿಲ್ಲ. ಈ ಸಂಬಂಧ ಉತ್ತರ ಪ್ರದೇಶದ ರಾಂಪುರ ತಾಂಡಾ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.