ಹಾವೇರಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸಬೇಕು ಎಂಬ ವಿಚಾರ ಸಂಬಂಧ ಕಾಗಿನೆಲೆಯ ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಅವರು ಇಂದು ಮಾತನಾಡಿದ್ದಾರೆ.
ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆ ಮಕರ ಸಂಕ್ರಾಂತಿಯಂದು ದೆಹಲಿ & ಬೆಂಗಳೂರಿನಲ್ಲಿ ಬೃಹತ್ ಹೋರಾಟ ಆಯೋಜಿಸಲಿದ್ದು, ಅಂದು ಸಮುದಾಯದ ನಾಲ್ವರು ಸ್ವಾಮೀಜಿಗಳು ಬೆಂಗಳೂರಿಗೆ ಪಾದಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಕನಕ ಗುರುಪೀಠದ ಪೀಠಾಧಿಪತಿ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದರು.
ಕುರುಬ ಸಮಾಜದ ಎಸ್ಟಿ ಮೀಸಲಾತಿ ಹೋರಾಟ ತೀವ್ರ ಗೊಂಡರೆ ಬಿಜೆಪಿ ಸರ್ಕಾರಕ್ಕೆ ದೊಡ್ಡ ಸಮಸ್ಯೆ ಎದುರಾಗುವ ಪಡೆದುಕೊಳ್ಳುವ ಸಾಧ್ಯತೆ ಇದೆ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ ಹಲವು ಮುಖಂಡರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.




