ಭೀಕರ ರಸ್ತೆ ಅಪಘಾತ: ಟಂಟಂನಲ್ಲಿ ಪ್ರಯಾಣಿಸುತ್ತಿದ್ದ ಐವರು ಮಹಿಳೆಯರ ದಾರುಣ ಸಾವು; ಉಳಿದವರ ಸ್ಥಿತಿ ಗಂಭೀರ

ಯಾದಗಿರಿ : ರಾಜ್ಯದಲ್ಲಿ ಕೊರೊನಾ ಸಾಕಷ್ಟು ಸಾವು ನೋವುಗಳನ್ನು ಸೃಷ್ಟಿಸುತ್ತಿರುವ ಮಧ್ಯೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಹೌದು ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ್ದು,…

Road accident vijayaprabha

ಯಾದಗಿರಿ : ರಾಜ್ಯದಲ್ಲಿ ಕೊರೊನಾ ಸಾಕಷ್ಟು ಸಾವು ನೋವುಗಳನ್ನು ಸೃಷ್ಟಿಸುತ್ತಿರುವ ಮಧ್ಯೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಹೌದು ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು ಬಳಿ ಟಂಟಂ ಮತ್ತು ಬೂದಿ ಟ್ಯಾಂಕರ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಟಂಟಂನಲ್ಲಿ ಪ್ರಯಾಣಿಸುತ್ತಿದ್ದ 10 ಜನರ ಪೈಕಿ 5 ಮಹಿಳೆಯರು ಮೃತಪಟ್ಟಿದ್ದರೆ, ಮತ್ತೆ ಐವರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಅಯ್ಯಮ್ಮ (60), ಶರಣಮ್ಮ (40), ಕಾಸೀಂಬೀ (40), ಭೀಮಬಾಯಿ (40) ಮತ್ತು ದೇವಿಂದ್ರಮ್ಮ (70) ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾಗಿದ್ದು, ಟಂಟಂ ವಾಹನದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿಡಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.