ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡ್ತಿದೆ ಎಂದು ಕೇಂದ್ರ ಸರಕಾರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಹೌದು,‘101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲು ʼರೇಡಿಯೋ ವಾಹಿನಿಯ ಪ್ರಸಾರ ಸ್ಥಗಿತಗೊಳಿಸಿರುವುದೇ ಇದಕ್ಕೆ ಕಾರಣವಾಗಿದ್ದು, ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ, ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು,’ರೇನ್ ಬೋ ಕನ್ನಡ ಕಾಮನಬಿಲ್ಲು’ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ ಆಗಿದ್ದು, ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 1/8 pic.twitter.com/qLMUx9LFtJ
— H D Kumaraswamy (@hd_kumaraswamy) January 28, 2022